ಹಿರಿಯ ಕಾಂಗ್ರೆಸ್ ನಾಯಕ ದಿ. ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ
ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ.

ಮೈಸೂರು: ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ.
ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಸುಮಾರು 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ.
ದರ್ಶನ್ ಸೇರಿದಂತೆ ಇಬ್ಬರು ಪುತ್ರರಿದ್ದಾರೆ. ವಿಜಯನಗರದ ಅವರ ಸ್ವಗೃಹದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಚಾಮರಾಜನಗರ ಜಿಲ್ಲೆಯ ಸ್ವಗ್ರಾಮ ಹೆಗ್ಗವಾಡಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಾ. 11ರಂದು ಧ್ರುವನಾರಾಯಣ್ ಅವರು ನಿಧನರಾಗಿದ್ದರು. ಅಂದು ಬೆಳಗಿನ ಜಾವದಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಆಗ ಮೈಸೂರಿನ ತಮ್ಮ ನಿವಾಸದಲ್ಲಿದ್ದ ಅವರು, ಆಸ್ಪತ್ರೆಗೆ ಹೋಗುವಷ್ಟರಲ್ಲಿ ನಿಧನರಾಗಿದ್ದರು.
ಕಳೆದ 2 ವರ್ಷಗಳಿಂದ ಧ್ರುವನಾರಾಯಣ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದ್ದರು. ಇವರು 2 ಬಾರಿ ಶಾಸಕರಾಗಿ 1 ಬಾರಿ ಸಂಸದರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


