ಪೊಲೀಸ್ ಕಮಿಷನರ್ ಜೊತೆ ವಾಗ್ವಾದಕ್ಕಿಳಿದ ಜೆಡಿಎಸ್ ಅಭ್ಯರ್ಥಿ ಮತ್ತು ಇತರ 7 ಮಂದಿ ವಿರುದ್ಧ ಎಫ್‌ಐಆರ್
ಕಲಬುರಗಿ ನಗರ ಪೊಲೀಸ್ ಆಯುಕ್ತರೊಂದಿಗೆ ವಾಗ್ವಾದಕ್ಕಿಳಿದಿದ್ದಕ್ಕಾಗಿ ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಕಲಬುರಗಿ: ನಗರ ಪೊಲೀಸ್ ಆಯುಕ್ತರೊಂದಿಗೆ ವಾಗ್ವಾದಕ್ಕಿಳಿದಿದ್ದಕ್ಕಾಗಿ ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.
ಪೊಲೀಸ್ ಮೂಲಗಳ ಪ್ರಕಾರ, ಕಲಬುರ್ಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಸೀರ್ ಹುಸೇನ್ ಉಸ್ತಾದ್ ಮತ್ತು ಅವರ ಸಹಚರರ ವಿರುದ್ಧ ದೂರು ದಾಖಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಎಂದು ಹೆಸರಿಸಲಾಗಿರುವ ನಾಸೀರ್ ಅವರು ಕಲಬುರ್ಗಿ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಆತನ ಸಹಚರರಾದ ಅಫ್ಜಲ್ ಮೊಹಮ್ಮದ್, ಶಫಿ ಪಟೇಲ್, ಮುದ್ದಸ್ಸಿರ್, ಘೌಸ್ ಭಗವಾನ್, ಮಜರ್ ಲಾಟೋರ್, ತಲಾಹ್ ಮತ್ತು ಸೊಹೈಲ್ ಅವರನ್ನು ಪ್ರಕರಣದಲ್ಲಿ ಸಹ ಆರೋಪಿಗಳೆಂದು ಹೆಸರಿಸಲಾಗಿದೆ.
ಬುಧವಾರ ಮುಸ್ಲಿಂ ಚೌಕ್ ಬಳಿ ಪೊಲೀಸರು ಬೀದಿಬದಿ ವ್ಯಾಪಾರಿಗಳನ್ನು ಖಾಲಿ ಮಾಡಿಸುತ್ತಿದ್ದಾಗ ಪೊಲೀಸ್ ಕಮಿಷನರ್ ಚೇತನ್ ಅವರೊಂದಿಗೆ ಜೆಡಿಎಸ್ ಮುಖಂಡ ವಾಗ್ವಾದ ನಡೆಸಿದರು. ಈ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಬೀದಿಬದಿ ವ್ಯಾಪಾರಿಗಳು ಈ ಕ್ರಮವನ್ನು ವಿರೋಧಿಸುತ್ತಿದ್ದಾಗ, ನಾಸಿರ್ ಅವರೊಂದಿಗೆ ಸೇರಿಕೊಂಡು ಪೊಲೀಸ್ ಆಯುಕ್ತರನ್ನು ಸಾರ್ವಜನಿಕವಾಗಿ ಪ್ರಶ್ನಿಸಿದರು. ವಾಗ್ವಾದದ ಬಳಿಕ ಪೊಲೀಸರ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು.
ರಂಜಾನ್ ಸಮಯದಲ್ಲಿ ಅಂಗಡಿಗಳು ಬರುತ್ತವೆ ಮತ್ತು ಹಬ್ಬದ ನಂತರ ಅದನ್ನು ಸರಿಯಾಗಿ ಅಂಗಡಿಗಳನ್ನು ತೆರವುಗೊಳಿಸಲಾಗುತ್ತದೆ. ಹೀಗಾಗಿ, ಪೊಲೀಸರು ಅವರಿಗೆ ತೊಂದರೆ ನೀಡಬಾರದು ಎಂದು ಮುಖಂಡರು ಸಮರ್ಥಿಸಿಕೊಂಡಿದ್ದರು.
ಈ ಸಂಬಂಧ ರೋಜಾ ಠಾಣೆ ಇನ್ಸ್‌ಪೆಕ್ಟರ್ ಮಹಾಂತೇಶ ಬಸಾಪುರ ದೂರು ದಾಖಲಿಸಿದ್ದರು. ಪೊಲೀಸರು ಐಪಿಸಿ ಸೆಕ್ಷನ್ 143, 147, 283 ಮತ್ತು 149 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


