ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇದೇ ವೇಳೆ ಏಪ್ರಿಲ್ 12ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಾರ್ವಜನಿಕರಿಗೆ ಮುನ್ಸೂಚನೆ ನೀಡಿದೆ.
ಈ ಪೈಕಿ ಏಪ್ರಿಲ್ 8 ರಂದು ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವೆಡೆ, ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ,ಧಾರವಾಡ, ಹಾವೇರಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ಒಂದಷ್ಟು ಕಡೆಗಳಲ್ಲಿ ಮಳೆಯಾಗಲಿದೆ.
ಇದರೊಂದಿಗೆ ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


