ಕೋವಿಡ್ ಪ್ರಕರಣ ಹೆಚ್ಚಳ: ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸಿ; ವೈದ್ಯರ ಸಲಹೆ
ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 11,000 ಗಡಿ ದಾಟಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಸೋಂಕು ಹೆಚ್ಚಳವಾಗುವ ಕುರಿತು ಆತಂಕ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 11,000 ಗಡಿ ದಾಟಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಸೋಂಕು ಹೆಚ್ಚಳವಾಗುವ ಕುರಿತು ಆತಂಕ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣ ಸ್ವಲ್ಪ ಹೆಚ್ಚಾಗಿದೆ. ಆದರೆ, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳಗಳಿಲ್ಲ ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರೋಗ ಲಕ್ಷಣ ಇರುವವರಿಗೆ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಪ್ರತಿನಿತ್ಯ ಸರಾಸರಿ 9,000 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಮಾತನಾಡಿ, ಜನರು ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸದಿರುವುದು ಪ್ರಕರಣಗಳ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಆದರೆ, ಈ ಪ್ರವೃತ್ತಿಯು ಹೆಚ್ಚು ಕಾಲ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.
ILI ಮತ್ತು SARI, ಅಡೆನೊವೈರಸ್, H3N2 ಮತ್ತು H1N1 ಪ್ರಕರಣಗಳಿಂದ ಎದುರಾಗುತ್ತಿರುವ ಸಾವುಗಳು ಕೆಲವೇ ದಿನಗಳ ಕಾಲವಷ್ಟೇ ಇರಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


