ಮಂಗಳೂರು: ಕಂದಕಕ್ಕೆ ಉರುಳಿದ ಕಾರು; ಮಹಿಳೆ ಸಾವು, ಪಂಚಾಯಿತಿ ಅಧ್ಯಕ್ಷೆ ಸೇರಿ ನಾಲ್ವರಿಗೆ ಗಾಯ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಕಮರಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದು, ಉಜಿರೆ ಗ್ರಾಮ ಪಂಚಾಯಿತಿ ಮುಖ್ಯಸ್ಥೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಕಮರಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದು, ಉಜಿರೆ ಗ್ರಾಮ ಪಂಚಾಯಿತಿ ಮುಖ್ಯಸ್ಥೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತರನ್ನು ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾವತಿ ಶೆಟ್ಟಿ ಅವರ ಸಂಬಂಧಿ ಸರೋಜಿನಿ ಶೆಟ್ಟಿ ಎಂದು ಗುರುತಿಸಲಾಗಿದೆ.
ಭಾನುವಾರ ರಾತ್ರಿ ಚಾರ್ಮಾಡಿ ಘಾಟ್ನ ಎರಡನೇ ತಿರುವಿನಲ್ಲಿ ಕಾರು ಕಮರಿಗೆ ಬಿದ್ದಿದ್ದು, ಅಪಘಾತದಲ್ಲಿ ಪಂಚಾಯಿತಿ ಮುಖ್ಯಸ್ಥೆ, ಅವರ ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ್, ಸಾಕ್ಷಿ ಮತ್ತು ಕಾರು ಚಾಲಕ ಅರುಣ್ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇವರೆಲ್ಲರೂ ಶೃಂಗೇರಿಯ ಕೊಪ್ಪದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಈ ದುರ್ಘಟನೆಯಲ್ಲಿ ಪುಷ್ಪಾವತಿ ಶೆಟ್ಟಿ ಅವರ ಕೈ ಮೂಳೆ ಮುರಿದಿದ್ದು, ಅವರ ಮಗಳ ತಲೆಗೆ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


