ವಂಚನೆ ಆರೋಪ, ಇಂಡಿಯನ್ ಮನಿ ಫ್ರೀಡಂ ಕಂಪನಿ ಸಿಇಒ ಸುಧೀರ್ ವಿಚಾರಣೆ
ಫಾರ್ಟ್ ಟೈಂ ಕೆಲಸದ ಆಮಿಷವೊಡ್ಡಿ ಹಣ ನೀಡದೆ ವಂಚಿಸಿರುವ ಆರೋಪದ ಮೇಲೆ ಇಂಡಿಯನ್ ಮನಿ ಫ್ರೀಡಂ ಕಂಪನಿ ಸಿಇಒ ಸಿ.ಎಸ್. ಸುಧೀರ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು: ಫಾರ್ಟ್ ಟೈಂ ಕೆಲಸದ ಆಮಿಷವೊಡ್ಡಿ ಹಣ ನೀಡದೆ ವಂಚಿಸಿರುವ ಆರೋಪದ ಮೇಲೆ ಇಂಡಿಯನ್ ಮನಿ ಫ್ರೀಡಂ ಕಂಪನಿ ಸಿಇಒ ಸಿ.ಎಸ್. ಸುಧೀರ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ವಂಚನೆಗೊಳಗಾಗಿರುವ 21 ಮಂದಿ ನೀಡಿದ ದೂರಿನ ಅನ್ವಯ ಸುಧೀರ್ ಸೇರಿದಂತೆ 23 ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸುಧೀರ್ ಗೆ ನೋಟಿಸ್ ನೀಡಲಾಗಿತ್ತು. ಅದರಂತೆ ಅವರು ಆಗಮಿಸಿದ್ದು, ಬನಶಂಕರಿ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಸುಧೀರ್ ಮತ್ತಿತರರು ಆ್ಯಪ್ ವೊಂದನ್ನು ಅಭಿವೃದ್ಧಿಪಡಿಸಿದ್ದು, ಅದರ ಪ್ರಚಾರಕ್ಕಾಗಿ ಯುವಕ- ಯುವತಿಯರನ್ನು ಬಳಸಿಕೊಂಡಿದ್ದು, ನಿಗದಿತ ದಿನದೊಳಗೆ ಸಂಬಳ ಕೊಟ್ಟಿಲ್ಲ, ಯಾವುದೇ ಕಾರಣ ನೀಡದೆ ಎಲ್ಲರನ್ನೂ ಕೆಲಸದಿಂದ ತೆಗೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


