ರಾಜ್ಯ

ಬಸ್‌ ಟಿಕೆಟ್‌ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿರುವ ಕೆಎಸ್‌ಆರ್‌ಟಿಸಿ

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನದ ಮಾಡುವಂತೆ ಬಸ್ ಟಿಕೆಟ್ ಮೂಲಕ ಜನತೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ.

ಬಸ್‌ ಟಿಕೆಟ್‌ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿರುವ ಕೆಎಸ್‌ಆರ್‌ಟಿಸಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನದ ಮಾಡುವಂತೆ ಬಸ್ ಟಿಕೆಟ್ ಮೂಲಕ ಜನತೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ.

ಪ್ರತಿ ಟಿಕೆಟ್ ಕೊನೆಯಲ್ಲಿ ಕನ್ನಡದ ಅಕ್ಷರದಲ್ಲಿ ಮೇ.10ರಂದು ಮತದಾನ ಮಾಡಲು ಮರೆಯದಿರಿ, ಮತದಾನ ನಿಮ್ಮ ಹಕ್ಕು ಎಂಬ ಸಂದೇಶವನ್ನು ಮುದ್ರಿಸಲಾಗಿದೆ.

ಈ ಮೂಲಕ ಕೆಎಸ್‌ಆರ್‌ಟಿಸಿಯಲ್ಲಿ ಪ್ರತಿದಿನ ಸಂಚರಿಸುವ ಲಕ್ಷಾಂತರ ಪ್ರಯಾಣಿಕರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ಕೆಎಸ್ಆರ್'ಟಿಸಿ ಮಾಡುತ್ತಿದೆ.

ಕೆಎಸ್‌ಆರ್‌ಟಿಸಿ ಎಂಡಿ ಅನ್ಬು ಕುಮಾರ್ ಅವರು ಮಾತನಾಡಿ, “ಬಿಬಿಎಂಪಿಯು ಕಸ ಸಂಗ್ರಹಿಸಲು ಪ್ರತಿ ಬೀದಿಗೆ ಹೋಗುವ ಆಟೋ ಟಿಪ್ಪರ್‌ಗಳಿಗೆ ಧ್ವನಿವರ್ಧಕಗಳನ್ನು ಅಳವಡಿಸುವ ಮೂಲಕ ಬೆಂಗಳೂರಿಗರಲ್ಲಿ ಮತದಾನದ ಜಾಗೃತಿ ಮೂಡಿಸುತ್ತಿದೆ. ನಮ್ಮ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರತಿದಿನ 20 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಾರೆ. ನಾವು ನಮ್ಮ ಪ್ರಯಾಣಿಕರಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ಬಯಸುತ್ತೇವೆ. ಹೀಗಾಗಿ ಟಿಕೆಟ್ ಗಳಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆಂದು ಹೇಳಿದ್ದಾರೆ.

“ಜಾಗೃತಿ ಅಭಿಯಾನದ ಭಾಗವಾಗಿರುವುದಕ್ಕೆ ನಮಗೆ ಸಂತೋಷವಾಗಿದೆ. ಮತದಾನವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಮತ್ತು ಅವರ ಹಕ್ಕು ಚಲಾಯಿಸುವುದನ್ನು ನೆನಪಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲೂ ಸಾರಿಗೆ ನಿಗಮವು ಚುನಾವಣೆ ಮತ್ತು ಮತದಾನದ ಜಾಗೃತಿ ಮೂಡಿಸುವ ಕೆಲಸ ಮಾಡಿತ್ತು. ಈ ವಾರ ಆರಂಭವಾಗಿರುವ ಮತದಾನ ಜಾಗೃತಿ ಅಭಿಯಾನ ಚುನಾವಣೆ ಮುಗಿಯುವವರೆಗೂ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.