ತುಮಕೂರು: ಇನ್ನೋವಾ ಕಾರು-ಖಾಸಗಿ ಬಸ್ ನಡುವೆ ಅಪಘಾತ; ಮಗು ಸೇರಿ ಐವರ ದುರ್ಮರಣ
ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತುಮಕೂರು: ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತುಮಕೂರಿನ ಹಿರೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಶಿರಾ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿತ್ತು.
ಮೃತರನ್ನು 58 ವರ್ಷದ ಗೋವಿಂದ ನಾಯಕ ಮತ್ತು 52 ವರ್ಷದ ತಿಪ್ಪಮ್ಮ ಮೃತ ದಂಪತಿ. ಇನ್ನುಳಿದ ಮೂವರ ಗುರುತು ಪತ್ತೆಯಾಗಿಲ್ಲ.
ವೇಗವಾಗಿ ಬಂದ ಬಸ್ ರಸ್ತೆಯ ಡಿವೈಡರ್ ಡಿಕ್ಕಿಯಾಗಿ ನಂತರ ಇನ್ನೋವಾ ಕಾರಿಗೆ ಗುದ್ದಿದೆ ಎಂದು ತಿಳಿದುಬಂದಿದೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


