ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ನೀರುಪಾಲು!
ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಗೋಕಾಕ್ ತಾಲೂಕಿನ ಧೂಪದಾಳ ಪಟ್ಟಣದ ಪ್ರವಾಸಿ ಮಂದಿರದ ಬಳಿ ಈ ಘಟನೆ ನಡೆದಿದೆ. ಮೃತರನ್ನು ಉತ್ತರ ಕನ್ನಡದ ಮುಂಡಗೋಡ ತಾಲೂಕಿನ ಹಿರಿಗೆರೆ ಗ್ರಾಮದ 18 ವರ್ಷದ ಸಂತೋಷ ಬಾಬು ಇಟಗಿ ಮತ್ತು ಅಜಯ್ ಬಾಬು ಜೋರೆ, 22 ವರ್ಷದ ಕೃಷ್ಣಾ ಬಾಬು ಜೋರೆ ಹಾಗೂ 19 ವರ್ಷದ ಆನಂದ ಕೋಕರೆ ಎಂದು ಗುರುತಿಸಲಾಗಿದೆ.
ಇಂದು ಬಾರ್ ಗೆ ರಜೆ ಇದ್ದ ಕಾರಣ ಮಧ್ಯಾಹ್ನ ಈಜಾಡಲೆಂದು ಆರು ಯುವಕರ ತಂಡ ನದಿಗೆ ಹೋಗಿತ್ತು. ಈ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ.
ಮೃತರು ಘಟಪ್ರಭಾದ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಎನ್ನಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


