ನೀತಿ ಸಂಹಿತೆ ಉಲ್ಲಂಘನೆ, ಚುನಾವಣಾ ಅಕ್ರಮ: ಒಟ್ಟು 150 ಕೋಟಿ ರೂಪಾಯಿ ಜಪ್ತಿ
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ರಾಜ್ಯದಲ್ಲಿ ಮಾ.29 ರಿಂದ ಈ ವರೆಗೂ ಒಟ್ಟು 150 ಕೋಟಿ ರೂಪಾಯಿ ಮೌಲ್ಯದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ರಾಜ್ಯದಲ್ಲಿ ಮಾ.29 ರಿಂದ ಈ ವರೆಗೂ ಒಟ್ಟು 150 ಕೋಟಿ ರೂಪಾಯಿ ಮೌಲ್ಯದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಮಾ.29 ರಿಂದ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಲ್ಲಿ ಒಟ್ಟು 150 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆಯಲಾಗಿದೆ.
ಒಟ್ಟು 149.58 ಕೋಟಿ ರೂಪಾಯಿ ಮೌಲ್ಯದ ಪೈಕಿ 61 ಕೋಟಿ ರೂಪಾಯಿಗಳಷ್ಟು ನಗದು, 33 ಕೋಟಿ ರೂಪಾಯಿ ಮೌಲ್ಯದ ಮದ್ಯ, 24 ಕೋಟಿ ರೂಪಾಯಿ ಮೌಲ್ಯದ ಅಮೂಲ್ಯ ಲೋಹಗಳು, 18 ಕೋಟಿ ರೂಪಾಯಿ ಮೌಲ್ಯದ ಉಚಿತ ಕೊಡುಗೆಗಳು, 13 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್, ನಾರ್ಕೊಟಿಕ್ಸ್ ಸೇರಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.
ವಶಕ್ಕೆ ಪಡೆಯಲಾಗಿರುವ ಪ್ರಕರಣಗಳಲ್ಲಿ 1,262 ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಮೇ.10 ಕ್ಕೆ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನ ಅಂದರೆ ಮಾ.09 ರಿಂದ ಮಾ.27 ವರೆಗೆ 58 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


