ಅದಾನಿ ಭ್ರಷ್ಟಾಚಾರದ ಪ್ರತೀಕ; ಪ್ರಧಾನಿ ನರೇಂದ್ರ ಮೋದಿ ಗುರಿಯಾಗಿಸಿ ರಾಹುಲ್ ಗಾಂಧಿ ವಾಗ್ದಾಳಿ
ಅದಾನಿ 'ಭ್ರಷ್ಟಾಚಾರ' ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕೋಲಾರ: ಅದಾನಿ 'ಭ್ರಷ್ಟಾಚಾರ' ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
2019ರಲ್ಲಿ ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಮಾಡಿದ ಟೀಕೆಗಾಗಿ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿತು. ನಂತರ ಅವರನ್ನು ಲೋಸಕಭಾ ಸಂಸದ ಸ್ಥಾನದಿಂದ ಅನರ್ಹಗೊಲಿಸಲಾಯಿತು.
ಮಾರ್ಚ್ 29 ರಂದು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಕರ್ನಾಟಕಕ್ಕೆ ಇದೇ ಮೊದಲ ಬಾರಿಗೆ ಭೇಟಿ ನೀಡಿರುವ ಅವರು, ಪ್ರಧಾನಿಯನ್ನು ಗುರಿಯಾಗಿಸಲು ಅದಾನಿ ವಿಷಯವನ್ನು ಒತ್ತಿ ಹೇಳಿದರು. ಇಲ್ಲಿ ನಡೆದ 'ಜೈ ಭಾರತ್' ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಅದಾನಿ ಭ್ರಷ್ಟಾಚಾರದ ಸಂಕೇತ ಎಂದರು.

ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪಕ್ಷವು ಸರ್ಕಾರ ರಚಿಸಿದ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ತನ್ನ ಪ್ರಮುಖ ಚುನಾವಣಾ ಭರವಸೆಗಳನ್ನು ಅಂಗೀಕರಿಸುತ್ತದೆ ಮತ್ತು ಅವುಗಳ ಅನುಷ್ಠಾನಕ್ಕೆ ದಾರಿ ಮಾಡಿಕೊಡಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಿಂದ ಎದುರಿಸುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಮಾರ್ಚ್ 23ರಂದು ಗುಜರಾತ್‌ನ ಸೂರತ್‌ನ ನ್ಯಾಯಾಲಯವು 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ 'ಎಲ್ಲಾ ಕಳ್ಳರು ಮೋದಿ ಉಪನಾಮವನ್ನು ಏಕೆ ಹೊಂದಿರುತ್ತಾರೆ' ಎಂಬ ಹೇಳಿಕೆಗಾಗಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.
2019ರ ಏಪ್ರಿಲ್‌ನಲ್ಲಿ ಕೋಲಾರದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


