ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ: ಸಿಎಂ ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿ ನಾಯಕರ ರಹಸ್ಯ ಸಭೆ
ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿಯಲು ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾದಾನಗೊಂಡಿರುವ ಜಗದೀಶ್ ಶೆಟ್ಟರ್ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿ ನಾಯಕರು ರಹಸ್ಯ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿಯಲು ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾದಾನಗೊಂಡಿರುವ ಜಗದೀಶ್ ಶೆಟ್ಟರ್ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿ ನಾಯಕರು ರಹಸ್ಯ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹುಬ್ಬಳ್ಳಿಯ ನಿವಾಸದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಚಿವ ಗೋವಿಂದ್ ಕಾರಜೋಳ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ರಹಸ್ಯ ಸಭೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.
ಈ ನಡುವೆ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರವ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆದಿದ್ದಾರೆಂದು ತಿಳಿದುಬಂದಿದೆ.
ಈ ಪ್ರಯಾಣದಲ್ಲಿ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಮುಖಂಡ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ ಜೊತೆಯಾಗಿದ್ದಾರೆಂದು ಹೇಳಲಾಗುತ್ತಿದ್ದು, ಈ ಬೆಳವಣಿಗೆ ಕುತೂಹಲ ಮೂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


