ರಾಜ್ಯ

ಮೇ 4 ರಂದು ಉಡುಪಿಗೆ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಭೇಟಿ ಸಾಧ್ಯತೆ

ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೇ 4 ರಂದು ಉಡುಪಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮೇ 4 ರಂದು ಉಡುಪಿಗೆ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಭೇಟಿ ಸಾಧ್ಯತೆ
ಉಡುಪಿಗೆ ಮೋದಿ, ಯೋಗಿ ಭೇಟಿ ಸಾಧ್ಯತೆ
Published On :

ಬೆಂಗಳೂರು: ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೇ 4 ರಂದು ಉಡುಪಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೋಮವಾರ ತಿಳಿಸಿದ್ದಾರೆ.

ಯೋಗಿ ಆದಿತ್ಯನಾಥ್‌ ಕೂಡ ಚುನಾವಣ ಪ್ರಚಾರಕ್ಕೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಂಗ್ರೆಸ್‌ ಕೂಡ ರಾಷ್ಟ್ರೀಯ ನಾಯಕರು, ಸ್ಟಾರ್‌ ಪ್ರಚಾರಕರನ್ನು ಜಿಲ್ಲೆಗೆ ಆಹ್ವಾನಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

ನಗರ ಅಥವಾ ಭೇಟಿಗೆ ಸೂಕ್ತವಾದ ಸ್ಥಳಗಳಲ್ಲಿ ಬೃಹತ್ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ. ರಾಷ್ಟ್ರೀಯ ನಾಯಕರು ಜಿಲ್ಲಾ ಪಕ್ಷಕ್ಕೆ ವಿಷಯ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮೋದಿ ಅವರೊಂದಿಗೆ ಬರುವ ನಿರೀಕ್ಷೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.