ಅಸಮಾಧಾನ ಮರೆತು ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಿ: ಕಾರ್ಯಕರ್ತರಿಗೆ ಬಿ.ಎಲ್ ಸಂತೋಷ್ ಕರೆ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಭಾನುವಾರ ಭವಿಷ್ಯ ನುಡಿದಿದ್ದಾರೆ.

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಭಾನುವಾರ ಭವಿಷ್ಯ ನುಡಿದಿದ್ದಾರೆ.
ಸಂತೋಷ್ ಮಂಗಳೂರು ಉತ್ತರ ಕ್ಷೇತ್ರದ ಚುನಾವಣಾ ಕಚೇರಿಯನ್ನು ಉದ್ಘಾಟಿಸಿದರು. ಆದರೆ, ರಾಜ್ಯ ರಾಜಕೀಯದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾಧ್ಯಮದವರ ಪ್ರಶ್ನೆಗೆ, ಉತ್ತರಿಸಿದ ಅವರು, ಈ ಬಾರಿ ಚುನಾವಣೆಯಲ್ಲಿ ನಾವು ಉತ್ತಮ ಪ್ರದರ್ಶನ ತೋರುತ್ತೇವೆ ಎಂದು ಸಂತೋಷ್ ಭರವಸೆ ವ್ಯಕ್ತ ಪಡಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.
ಬಿಜೆಪಿ ಕಾರ್ಯಕರ್ತರು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಸಂತೋಷ್ ಕರೆ ನೀಡಿದರು. ಭರವಸೆಗಳನ್ನು ಈಡೇರಿಸಲು ಹಣ ಹೇಗೆ ಸಿಗುತ್ತದೆ ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಬೇಕು. ನಮ್ಮ ಅವಧಿಯಲ್ಲಿ ರಾಜ್ಯ ಅಭಿವೃದ್ಧಿ ಕಂಡಿದೆ, ಅಭಿವೃದ್ಧಿ ಕಾರ್ಯಗಳ ಕುರಿತು ಜನರ ಬಳಿಗೆ ತೆರಳಿ ಮತ ಕೇಳಲು ಹಿಂಜರಿಕೆ ಇಲ್ಲ ಎಂದಿದ್ದಾರೆ.
ಅಭ್ಯರ್ಥಿಗಳ ಬದಲಾವಣೆಯಿಂದ ಒಂದೆರಡು ಕ್ಷೇತ್ರದಲ್ಲಿ ಕೆಲವರಿಗೆ ಅಸಮಾಧಾನ ಆಗಿರಬಹುದು. ಅದನ್ನು ಚುನಾವಣೆಯ ಮುಖ್ಯ ವಿಷಯವನ್ನಾಗಿಸದೆ ಆದಷ್ಟು ಬೇಗ ಪೂರ್ಣ ಪ್ರಮಾಣದಲ್ಲಿ ಚುನಾವಣೆಗೆ ಧುಮುಕಿ 2018ರ ಮಾದರಿಯಲ್ಲೇ ಈ ಬಾರಿಯೂ ಎಲ್ಲ ಕ್ಷೇತ್ರಗಳಲ್ಲಿ ಗೆಲುವಿಗೆ ಶ್ರಮಿಸಬೇಕು ಎಂಬ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


