ಒಂದು ಗಿಡ-ನೂರೊಂದು ಅರ್ಥ: ಚರ್ಚೆಗೆ ಕಾರಣವಾಯ್ತು ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾಡಿರುವ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದೆ. ತಮ್ಮ ಪತಿ ಅನಂತಕುಮಾರ್ ಅವರು ಲಾಲ್‌ಬಾಗ್‌ನಲ್ಲಿ ನೆಟ್ಟ ಗಿಡ ಬಾಡಿ ಹೋಗಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾಡಿರುವ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದೆ. ತಮ್ಮ ಪತಿ ಅನಂತಕುಮಾರ್ ಅವರು ಲಾಲ್‌ಬಾಗ್‌ನಲ್ಲಿ ನೆಟ್ಟ ಗಿಡ ಬಾಡಿ ಹೋಗಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.
2015ರ ಜೂನ್ 5ರಂದು ಲಾಲ್‌ಬಾಗ್ ಪಶ್ಚಿಮ ದ್ವಾರದ ಬಳಿ ಅನಂತಕುಮಾರ್ ಅವರು ಈ ಗಿಡ ನೆಟ್ಟಿದ್ದರು. ಯಾಕೋ ಮುದುರಿ ಹೋಗಿದೆ. ಲಾಲ್‌ಬಾಗ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಅನಂತಕುಮಾರ ಅವರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು ಎಂಬುದು ನನ್ನ ಭಾವನೆ’ ಎಂದಿದ್ದಾರೆ.
ತೇಜಸ್ವಿನಿ ಅವರು ವಿಧಾನಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದರು ಆದರೆ, ಅವರಿಗೆ ಟಿಕೆಟ್ ತಪ್ಪಿರುವುದರಿಂದ ತಮ್ಮ ವೇದನೆಯನ್ನು ಸೂಚ್ಯವಾಗಿ ಈ ರೀತಿ ವ್ಯಕ್ತಪಡಿಸಿರಬಹುದು ಎಂಬ ಚರ್ಚೆ ನಡೆಯುತ್ತಿದೆ. ಈ ಟ್ವೀಟ್ ಮಾಡುವುದಕ್ಕೂ ಮುನ್ನ ಅವರು, 'ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?' ಎಂದು ಟ್ವೀಟ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


