ರಾಜ್ಯ

ಬಿಜೆಪಿಗೆ ಪೇಶ್ವೆ ಡಿಎನ್ಎ ಹೊಂದಾಣಿಕೆಯಾಗುತ್ತದೆಯೇ ಹೊರತು ಬಸವಣ್ಣನ ಡಿಎನ್ಎ ಅಲ್ಲ: ಕಾಂಗ್ರೆಸ್ ವಿರುದ್ಧ ದೂರು

ಲಿಂಗಾಯತ ಮತ್ತು ಬ್ರಾಹ್ಮಣ ಸಮುದಾಯಗಳನ್ನು ಅವಮಾನಿಸುವ ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥರ ವಿರುದ್ಧ ರಾಜ್ಯ ಬಿಜೆಪಿ ಕಾನೂನು ಘಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬಿಜೆಪಿಗೆ ಪೇಶ್ವೆ ಡಿಎನ್ಎ ಹೊಂದಾಣಿಕೆಯಾಗುತ್ತದೆಯೇ ಹೊರತು ಬಸವಣ್ಣನ ಡಿಎನ್ಎ ಅಲ್ಲ: ಕಾಂಗ್ರೆಸ್ ವಿರುದ್ಧ ದೂರು
ಡಿ.ಕೆ ಶಿವಕುಮಾರ್
Published On :

ಬೆಂಗಳೂರು: ಲಿಂಗಾಯತ ಮತ್ತು ಬ್ರಾಹ್ಮಣ ಸಮುದಾಯಗಳನ್ನು ಅವಮಾನಿಸುವ ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥರ ವಿರುದ್ಧ ರಾಜ್ಯ ಬಿಜೆಪಿ ಕಾನೂನು ಘಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಏಪ್ರಿಲ್ 16ರಂದು ಟ್ವೀಟ್ ಮಾಡಿದ್ದ ಕಾಂಗ್ರೆಸ್" ಬಿಜೆಪಿಗೆ ಪೇಶ್ವೆ DNA ಹೊಂದಾಣಿಕೆಯಾಗುತ್ತದೆಯೇ ಹೊರತು ಬಸವಣ್ಣನ DNA ಹೊಂದಾಣಿಕೆಯಾಗುವುದಿಲ್ಲ. ಈ ಪೇಶ್ವೆ DNA ಹೊಂದಿದವರು ಬಸವಣ್ಣನ DNA ಹೊಂದಿದವರನ್ನು ಹೊರದಬ್ಬುತ್ತಿದ್ದಾರೆ. ಬಿಜೆಪಿ ಈಗ ತನ್ನ ಮನುವಾದದ ಸ್ಪಷ್ಟತೆಯ ಹಾದಿಯತ್ತ ಸಾಗುತ್ತಿದೆ.! ಎಂದು ಟ್ವಿಟ್ಟರ್ ನಲ್ಲಿ ಬರೆದಿತ್ತು.

ಕಾಂಗ್ರೆಸ್ ತನ್ನ ಟ್ವೀಟ್‌ನಲ್ಲಿ ಪೇಶ್ವೆ ಬ್ರಾಹ್ಮಣರ ಪರವಾಗಿ ಬಿಜೆಪಿ ಒಲವು ತೋರುತ್ತಿದೆ ಎಂದು ಆರೋಪಿಸಿದೆ, ಕೇಸರಿ ಪಕ್ಷವು ಬಸವಣ್ಣ ಮತ್ತು ಲಿಂಗಾಯತ ಸಮುದಾಯದ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಹೇಳಿದೆ ಎಂದು ಬಿಜೆಪಿ ಕಾನೂನು ಘಟಕ ತನ್ನ ದೂರಿನಲ್ಲಿ ತಿಳಿಸಿದೆ.

ಇದು ಬ್ರಾಹ್ಮಣರು ಮತ್ತು ಲಿಂಗಾಯತರಿಗೆ ಮಾಡಿದ ಅವಮಾನ. ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಹಿಂದೂಗಳಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿದೆ. ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಲಾಭ ಗಳಿಸುವುದು ಕಾಂಗ್ರೆಸ್‌ ಉದ್ದೇಶ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಬಿಜೆಪಿ ಆರೋಪಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.