ರಾಜ್ಯ

ವಿಧಾನಸಭೆ ಚುನಾವಣೆ: ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ನಗದು ವಶ, ಈವರೆಗೆ ವಶಪಡಿಸಿಕೊಂಡಿದ್ದೆಷ್ಟು?

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1.54 ಕೋಟಿ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಿಧಾನಸಭೆ ಚುನಾವಣೆ: ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ನಗದು ವಶ, ಈವರೆಗೆ ವಶಪಡಿಸಿಕೊಂಡಿದ್ದೆಷ್ಟು?
ಪ್ರಾತಿನಿಧಿಕ ಚಿತ್ರ
Published On :

ಬೆಳಗಾವಿ: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1.54 ಕೋಟಿ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹೆಚ್ಚಿನ ತನಿಖೆಗಾಗಿ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರನ್ನು ಅಡ್ಡಗಟ್ಟಿ 1.54 ಕೋಟಿ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ಐಟಿ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ 10 ರಂದು ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮೇ 13ಕ್ಕೆ ಮತಎಣಿಕೆ ನಡೆಯಲಿದೆ.

ಮಾರ್ಚ್ 29 ರಂದು ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ 76.70 ಕೋಟಿ ರೂಪಾಯಿ ನಗದು, 42.82 ಕೋಟಿ ರೂಪಾಯಿ ಮೌಲ್ಯದ ಮದ್ಯ, 49.71 ಕೋಟಿ ರೂ. ಮೌಲ್ಯದ 656.97 ಕೆಜಿ ಚಿನ್ನ ಸೇರಿದಂತೆ 204 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.