ಪ್ರವಾಸಿಗರೇ ಗಮನಿಸಿ: ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ, ಹೊಸ ವೇಳಾಪಟ್ಟಿ ಇಂತಿದೆ!
ಕರ್ನಾಟಕದ ಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ವೇಳಾಪಟ್ಟಿ ಪರಿಷ್ಕರಣೆ ಮಾಡಿ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕದ ಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ವೇಳಾಪಟ್ಟಿ ಪರಿಷ್ಕರಣೆ ಮಾಡಿ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾಹಿತಿ ನೀಡಿದ್ದಾರೆ.
ಬೇಸಿಗೆ ಹಿನ್ನಲೆಯಲ್ಲಿ ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಬೇಸಿಗೆ ರಜೆ ಹಿನ್ನೆಲೆಯಲ್ಲಿ ಪ್ರಸಿದ್ಧ ನಂದಿಗಿರಿಧಾಮದ ಪ್ರವೇಶದ ಅವಧಿಯನ್ನು ಪರಿಷ್ಕರಿಸಲಾಗಿದೆ. ಬೆಳಿಗ್ಗೆ 5ರಿಂದ ಸಂಜೆ 7ರವರೆಗೆ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದ್ದಾರೆ.
ಈ ಹಿಂದೆ ಬೆಳಿಗ್ಗೆ 5.30 ರಿಂದ ಸಂಜೆ 6ರವರೆಗೆ ಪ್ರವೇಶಕ್ಕೆ ಅವಕಾಶವಿತ್ತು. ಬೇಸಿಗೆ ರಜೆ ಪ್ರಾರಂಭವಾಗುತ್ತಿದೆ. ಸೂರ್ಯೋದಯ ಮತ್ತು ಸೂರ್ಯಾಸ್ತ ವೀಕ್ಷಣೆಗಾಗಿ ಪ್ರವಾಸಿಗರಿಗೆ ಹೆಚ್ಚಿನ ಕಾಲಾವಕಾಶ ಒದಗಿಸುವ ನಿಟ್ಟಿನಲ್ಲಿ ಮತ್ತು ನಂದಿಗಿರಿಧಾಮ ಸಮಗ್ರ ಅಭಿವೃದ್ಧಿ ಮತ್ತು ನಿರ್ವಹಣಾಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ಸಮಯ ವಿಸ್ತರಿಸಲಾಗಿದೆ ಎಂದರು. ಈ ವಿಸ್ತರಣೆ ಸೆಪ್ಟೆಂಬರ್ 30ರವರೆಗೆ ಅನ್ವಯ ಆಗಲಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


