ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ: ತಂದೆ ಇಬ್ಬರು ಮಕ್ಕಳು ಸೇರಿ ಐವರ ದುರ್ಮರಣ!
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.

ಚನ್ನಪಟ್ಟಣ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಈ ದುರಂತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೊವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮೃತರನ್ನು 45 ವರ್ಷದ ರವಿ ಪೂಜಾರ್, 40 ವರ್ಷದ ಲಕ್ಷ್ಮೀ ಪೂಜಾರ್, 15 ವರ್ಷದ ಇಂಚರಾ ಪೂಜಾರ್, 10 ವರ್ಷದ ಶಾಂತಲಾ ಪೂಜಾರ್ ಹಾಗೂ 3 ವರ್ಷದ ಸಿರಿ ಪೂಜಾರ್ ಎಂದು ಗುರುತಿಸಲಾಗಿದೆ.
ಇನ್ನೊವಾ ಕಾರಿನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಟಿ.ನರಸೀಪುರ ಮೂಲದವರು ಎಂದು ಹೇಳಲಾಗುತ್ತಿದೆ. ಅಪಘಾತದ ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


