ರಾಜ್ಯ

ಕರ್ನಾಟಕ ಚುನಾವಣೆ: ಚುನಾವಣಾ ಆಯೋಗದಿಂದ ಒಟ್ಟು ರೂ. 250 ಕೋಟಿಗೂ ಅಧಿಕ ನಗದು, ವಸ್ತುಗಳು ಜಪ್ತಿ

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆಯಾದಾಗಿನಿಂದ ಇಲ್ಲಿಯವರೆಗೂ ರಾಜ್ಯದಲ್ಲಿ ಒಟ್ಟು 250 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಭಾನುವಾರ ತಿಳಿಸಿದೆ.

ಕರ್ನಾಟಕ ಚುನಾವಣೆ: ಚುನಾವಣಾ ಆಯೋಗದಿಂದ ಒಟ್ಟು ರೂ. 250 ಕೋಟಿಗೂ ಅಧಿಕ ನಗದು, ವಸ್ತುಗಳು ಜಪ್ತಿ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು:  ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆಯಾದಾಗಿನಿಂದ ಇಲ್ಲಿಯವರೆಗೂ ರಾಜ್ಯದಲ್ಲಿ ಒಟ್ಟು 250 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಭಾನುವಾರ ತಿಳಿಸಿದೆ.

82 ಕೋಟಿ ರೂಪಾಯಿ ನಗದು, 57 ಕೋಟಿ ರೂ.ಮೌಲ್ಯದ ಮದ್ಯ, ರೂ. 78 ಕೋಟಿ ಮೊತ್ತದ ಬೆಳ್ಳಿ, ರೂ. 20 ಕೋಟಿ ಮೊತ್ತದ ಗಿಫ್ಟ್, 17 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೇರಿದಂತೆ ಒಟ್ಟು 250 ಕೋಟಿ ಮೊತ್ತದ  ಅಕ್ರಮ ವಸ್ತು ವಶಕ್ಕೆ ಪಡೆಯಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ. 

ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 1,930 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.  ಮೇ 10 ರ ವಿಧಾನಸಭಾ ಚುನಾವಣೆಯ ಘೋಷಣೆಯ ಮೊದಲು ಸುಮಾರು 58 ಕೋಟಿ ರೂ ಮೌಲ್ಯದ ಅಕ್ರಮ ನಗದು, ವಸ್ತು ವಶಕ್ಕೆ ಪಡೆಯಲಾಗಿತ್ತು. 

224 ಸದಸ್ಯ ಬಲದ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.