ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀ: ಚಿಕಿತ್ಸೆಯ ಮಧ್ಯದಲ್ಲೇ ಎಚ್ ಡಿಕೆ ಚುನಾವಣಾ ಕಾರ್ಯತಂತ್ರ !
ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿದ ಆದಿಚುಂಚನಗಿರಿ ಮಠದ ಮಠಾಧೀಶ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.

ಬೆಂಗಳೂರು: ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿದ ಆದಿಚುಂಚನಗಿರಿ ಮಠದ ಮಠಾಧೀಶ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಗೆ ತೆರಳಿದ್ದ ಶ್ರೀಗಳು ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದರು. ವಿಶ್ರಾಂತಿ ಪಡೆದು ಶೀಘ್ರ ಗುಣಮುಖರಾಗಿ ಎಂದು ಶ್ರೀಗಳು ಹಾರೈಸಿದ್ದಾರೆ. ನಗರದ ಮಣಿಪಾಲ್ ಆಸ್ಪತ್ರೆಗೆ ಶನಿವಾರ ದಾಖಲಾಗಿರುವ ಕುಮಾರಸ್ವಾಮಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ತಮ್ಮ ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆಸಿಕೊಂಡು ಚುನಾವಣಾ ಪ್ರಚಾರದ ಪ್ರವಾಸ ವೇಳಾಪಟ್ಟಿ ಕುರಿತು ಚರ್ಚಿಸಿದ್ದಾರೆ. ಇದೇ 28ರಿಂದ ಬೀದರ್ ಭಾಗದಿಂದ ಪ್ರವಾಸ ಆರಂಭಿಸುವ ಬಗ್ಗೆಯೂ ತಾತ್ಕಾಲಿಕ ವೇಳಾಪಟ್ಟಿಯನ್ನು ಸಿಬ್ಬಂದಿಗೆ ನೀಡಿದ್ದಾರೆ.
‘ಚುನಾವಣೆಯ ಒತ್ತಡ ಇರುವುದರಿಂದ ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದಲೂ ಕೆಲಸ ಮಾಡುತ್ತಿದ್ದಾರೆ. ಅಲ್ಲಿಂದಲೇ ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ತೀವ್ರ ಜ್ವರದ ನಡುವೆಯೂ ಕುಮಾರಸ್ವಾಮಿ ಫೋನಿನಲ್ಲಿಚುನಾವಣಾ ಪ್ರಚಾರ ಮತ್ತು ಮತದಾರರನ್ನು ಸೆಳೆಯುವ ಕುರಿತು ಆಸ್ಪತ್ರೆಯಿಂದಲೇ ಮಾರ್ಗದರ್ಶನ ನೀಡುತ್ತಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


