ಬೆಳ್ತಂಗಡಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಗಂಗಾಧರ ಗೌಡ ನಿವಾಸದ ಮೇಲೆ ಐಟಿ ದಾಳಿ
ಕಾಂಗ್ರೆಸ್ ಮುಖಂಡ ಗಂಗಾಧರ ಗೌಡ ಅವರ ಎರಡು ವಸತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಶಿಕ್ಷಣ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ಸೋಮವಾರ ದಾಳಿ ನಡೆಸಿದೆ.

ಮಂಗಳೂರು: ಕಾಂಗ್ರೆಸ್ ಮುಖಂಡ ಗಂಗಾಧರ ಗೌಡ ಅವರ ಎರಡು ವಸತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಶಿಕ್ಷಣ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ಸೋಮವಾರ ದಾಳಿ ನಡೆಸಿದೆ.
ಈ ಶಿಕ್ಷಣ ಸಂಸ್ಥೆಯು ಗಂಗಾಧರಗೌಡ ಅವರ ಪುತ್ರ ರಂಜನ್ ಗೌಡ ಅವರಿಗೆ ಸೇರಿದ್ದಾಗಿದೆ.
ಗಂಗಾಧರಗೌಡರು 2018 ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರಿದ್ದರು. ಕರ್ನಾಟಕ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ ಅವರು ಇತ್ತೀಚೆಗೆ ಸಕ್ರಿಯ ರಾಜರಾರಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು.
ಈ ಸಂಬಂಧ ಇನ್ನಷ್ಟೇ ಹೆಚ್ಚಿನ ವಿವರಗಳು ತಿಳಿಯಬೇಕಿದೆ.
ಈಮಧ್ಯೆ, ಆದಾಯ ತೆರಿಗೆ (ಐಟಿ) ಇಲಾಖೆಯು ತಮಿಳುನಾಡಿನ ಅನೇಕ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಖಾಸಗಿ ಸಂಸ್ಥೆಗೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ತಮಿಳುನಾಡಿನ 50 ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ಇಂದು ತಿಳಿಸಿವೆ.
ಮೂಲಗಳ ಪ್ರಕಾರ, ಖಾಸಗಿ ಸಂಸ್ಥೆಯು ಡಿಎಂಕೆಯೊಂದಿಗೆ ಬಹಳ ನಿಕಟ ಸಂಪರ್ಕ ಹೊಂದಿದೆ ಎಂದು ಹೇಳಲಾಗಿದೆ.
ಅಣ್ಣಾನಗರದ ಡಿಎಂಕೆ ಶಾಸಕ ಎಂಕೆ ಮೋಹನ್ ಅವರ ಪುತ್ರ, ಸಂಸ್ಥೆಯ ಷೇರುದಾರ ಕಾರ್ತಿಕ್ ಅವರ ಮನೆ ಮೇಲೆ ಆದಾಯ ತೆರಿಗೆ ದಾಳಿ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


