ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸದಲ್ಲಿ ಕಂತೆ ಕಂತೆ ಹಣ: ಲೋಕಾಯುಕ್ತ ಅಧಿಕಾರಿಗಳು ದಂಗು!
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕಂತೆ ಕಂತೆ ನೋಟುಗಳನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳು ದಂಗಾದರು.

ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕಂತೆ ಕಂತೆ ನೋಟುಗಳನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳು ದಂಗಾದರು.
ಗಂಗಾಧರಯ್ಯರಿಗೆ ಸೇರಿದ ಯಲಹಂಕದಲ್ಲಿನ ಕಚೇರಿ, ಮಹಾಲಕ್ಷ್ಮಿ ಲೇಔಟ್ನಲ್ಲಿನ ಸಂಬಂಧಿಗಳ ನಿವಾಸ ಹಾಗೂ ಕುರುಬರಹಳ್ಳಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ 1.5 ಕೋಟಿ ಹಣ, ವಿದೇಶಿ ಕರೆನ್ಸಿ, 2 ಕೋಟಿ ರೂ.ಗಳಿಗೂ ಹೆಚ್ಚಿನ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಎಸ್'ಪಿ. ಅಶೋಕ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಅಂದಾಜು ಮೊತ್ತ 1.5 ಕೋಟಿ ರೂಪಾಯಿ ನಗದು, 2 ಕೋಟಿ ರೂ.ಗಳಿಗೂ ಹೆಚ್ಚಿನ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಪತ್ತೆಯಾಗಿವೆ ಎಂದು ವರದಿಗಳು ತಿಳಿಸಿವೆ.
ಅಲ್ಲದೇ, ವಿದೇಶಿ ಕರೆನ್ಸಿ ಕೂಡ ಮನೆಯಲ್ಲಿ ಸಿಕ್ಕಿವೆ. ಅಧಿಕಾರಿಗಳು ಇನ್ನೂ ಅವರ ನಿವಾಸ, ಕಚೇರಿಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.
ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಚುನಾವಣೆಯ ಕಾರ್ಯಕ್ಕೆ ನೇಮಕವಾಗಿದ್ದು, ಇವರ ಕಾರಿನ ಮೇಲೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಸ್ಟಿಕ್ಕರ್ ಇರುವುದಾಗಿ ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


