ಕಾಂಗ್ರೆಸ್ ಗೆ ರಾಹುಲ್ ಗಾಂಧಿ ಹೀರೋ, ಬಿಜೆಪಿಗೆ ಕಾರ್ಯಕರ್ತರೇ ಹೀರೋಗಳು: ಅಣ್ಣಾಮಲೈ
ಕಾಂಗ್ರೆಸ್‌ಗೆ ಹೀರೋ ರಾಹುಲ್ ಗಾಂಧಿ ಬಿಜೆಪಿಗೆ ಕಾರ್ಯಕರ್ತರೇ ಹೀರೋ. ನಮ್ಮಲ್ಲಿ ಕಾರ್ಯಕರ್ತರು ಹೀರೋ ಆಗಿರೋವರೆಗೂ ಏನೂ ಸಮಸ್ಯೆ ಇಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ಗೆ ಹೀರೋ ರಾಹುಲ್ ಗಾಂಧಿ ಬಿಜೆಪಿಗೆ ಕಾರ್ಯಕರ್ತರೇ ಹೀರೋ. ನಮ್ಮಲ್ಲಿ ಕಾರ್ಯಕರ್ತರು ಹೀರೋ ಆಗಿರೋವರೆಗೂ ಏನೂ ಸಮಸ್ಯೆ ಇಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಶಿಡ್ಲಘಟ್ಟದಲ್ಲಿ ಹಮ್ಮಿಕೊಂಡಿದ್ದ ಡಿಜಿಟಲ್ ಮೀಡಿಯಾ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಲಿಂಗಾಯತ ಸಿಎಂ ರಾಜ್ಯವನ್ನು ಹಾಳುಮಾಡಿಬಿಟ್ಟರು ಎಂಬ ಸಿದ್ದರಾಮಯ್ಯನವರ ಹೇಳಿಕೆ ಹಿನ್ನೆಲೆ ಮಾತನಾಡಿದ ಅಣ್ಣಾಮಲೈ, ಎಲ್ಲಾ ಜಾತಿಯವರು ನಮ್ಮ ಪಕ್ಷದಲ್ಲಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರಿದ್ದಾರೆ, ತಮಿಳುನಾಡಿನಲ್ಲಿ ತಮಿಳುಗರಿದ್ದಾರೆ. ಕರ್ನಾಟಕದಲ್ಲಿ ಒಂದು ಸಮುದಾಯಕ್ಕೆ ಕಪ್ಪು ಚುಕ್ಕೆ ತರುವಂತಹ ಕೆಲಸ ಕಾಂಗ್ರೆಸ್‌ನವರು ಮಾಡುತ್ತಿದ್ದಾರೆ. ಎಲ್ಲ ಸಮುದಾಯಗಳು ಸೇರಿ ಇದನ್ನು ವಿರೋಧ ಮಾಡಬೇಕು ಎಂದು ಆಗ್ರಹಿಸಿದರು.
ಬಿಜೆಪಿಯಲ್ಲಿ ಸೋತ ಮೇಲು ಉಪ ಮುಖ್ಯಮಂತ್ರಿಯಾಗಿದ್ದಾರೆ. ಎಂಎಲ್‌ಸಿ ಕೊಟ್ಟಿದ್ದೇವೆ. ನಾನು ಏನೂ ಇಲ್ಲದೆ ಕೆಲಸ ಮಾಡ್ತಾ ಇದ್ದೇನೆ. ಆದರೆ, ಡಿಕೆಶಿ ಸಿದ್ದರಾಮಯ್ಯ ಕರ್ನಾಟಕ ರಾಜ್ಯವನ್ನು ಎಟಿಎಂ ಎಂದು ತಿಳಿದುಕೊಂಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.
ಜಗದೀಶ್ ಶೆಟ್ಟರ್‌ಗೆ ಉತ್ತರ ಕರ್ನಾಟಕದಲ್ಲಿ ಪ್ರಚಾರ ಮಾಡುವಂತೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದಾರೆ. ಇದರಿಂದ ಸ್ಥಳೀಯ ನಾಯಕರು ಇದನ್ನು ಪ್ರಶ್ನಿಸಬೇಕು. ಯಾರಾದರೂ ಕಾಂಗ್ರೆಸ್‌ಗೆ ಹೋದಾಗ ಕೈ ಕುಲುಕುವುದು, ಶಾಲು ಹಾಕುವುದು ಮಾಮೂಲಿ, ಒಂದು ಗಾಡಿಯಲ್ಲಿ ಪೆಟ್ರೋಲ್ ಮುಗಿದ್ರೆ ಇನ್ನೊಂದು ಗಾಡಿ ಹಿಡಿಯುತ್ತಾರೆ. ರಾಹುಲ್ ಗಾಂಧಿ ಅವರೇ ಉತ್ತರ ಕರ್ನಾಟಕದಲ್ಲಿ ಇಷ್ಟು ದಿನ ಕಾಂಗ್ರೆಸ್ ನಾಯಕರು ಇರಲಿಲ್ಲವೇ ಎಂದು ಅಣ್ಣಾಮಲೈ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


