ವಿಧಾನಸಭೆ ಚುನಾವಣಾ ಅಖಾಡದಲ್ಲಿ ಮಾವಂದಿರು: ಇಬ್ಬರು ಐಪಿಎಸ್ ಅಳಿಯಂದಿರಿಗೆ 'ವರ್ಗಾವಣೆ ಭಾಗ್ಯ'!
ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಎಸ್ಪಿ ಮತ್ತು ನಿರ್ದೇಶಕರಾದ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ವೈಟ್‌ಫೀಲ್ಡ್ ಡಿಸಿಪಿಯಾಗಿ ನಿಯೋಜಿಸಲಾಗಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆಗೂ ಮುನ್ನ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಎಸ್ಪಿ ಮತ್ತು ನಿರ್ದೇಶಕರಾದ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ವೈಟ್‌ಫೀಲ್ಡ್ ಡಿಸಿಪಿಯಾಗಿ ನಿಯೋಜಿಸಲಾಗಿದೆ.
ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಎಸ್ಪಿ ಮತ್ತು ಪ್ರಾಂಶುಪಾಲರಾದ ಡಾ.ಅರುಣ್ ಕೆ ಅವರನ್ನು ದಾವಣಗೆರೆಯ ಎಸ್ಪಿಯಾಗಿ ನಿಯೋಜಿಸಲಾಗಿದೆ.
ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಭಾನುವಾರ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಎಸ್. ಗಿರೀಶ್ ಅವರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಧರ್ಮೇಂದ್ರಕುಮಾರ್ ಮೀನಾ ಅವರನ್ನು ವರ್ಗಾಯಿಸಲಾಗಿದೆ. ದಾವಣಗೆರೆ ಎಸ್ಪಿ ಸಿ.ಬಿ. ರಿಷ್ಯಂತ್ ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಡಾ. ಕೆ. ಅರುಣ್ ಅವರನ್ನು ವರ್ಗಾವಣೆ ಮಾಡಲಾಗಿದೆ.
‘ಗಿರೀಶ್ ಅವರ ಮಾವ ಕೆ.ಎನ್. ರಾಜಣ್ಣ, ಮಧುಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ. ರಿಷ್ಯಂತ್ ಅವರ ಮಾವ ಎಸ್. ಮುನಿರತ್ನ, ಬೆಂಗಳೂರು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
ಅಧಿಕಾರಿಗಳ ನೇರ ಸಂಬಂಧಿಗಳು ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


