ಬೆಂಗಳೂರು: ನಾಯಂಡಹಳ್ಳಿ ಬಳಿ ಬೈಕ್‌ಗೆ ಟಿಪ್ಪರ್ ಡಿಕ್ಕಿ, ಸವಾರ ಸಾವು
ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಮಂಗಳವಾರ ನಡೆದಿದೆ.

ಬೆಂಗಳೂರು: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ಇಂದು ಬೆಳಗ್ಗೆ ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಟಿವಿಎಸ್ ಎಕ್ಸ್‌ಎಲ್ ಬೈಕ್‌ಗೆ ಟಿಪ್ಪರ್ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಕೆಳಗೆ ಬಿದ್ದಿದ್ದು, ಓರ್ವನ ಮೇಲೆ ಲಾರಿಯ ಚಕ್ರ ಹರಿದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ವ್ಯಕ್ತಿಯ ಕಾಲಿನ ಮೇಲೆ ಲಾರಿ ಹರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ.
ಅಪಘಾತ ನಂತರ ಚಾಲಕ ಲಾರಿಯನ್ನು ಅಲ್ಲಿಯೇ ಬಿಟ್ಟು ಪರಾರಿ ಆಗಿದ್ದಾನೆ.
ಈ ಘಟನೆ ನಡೆಯುತ್ತಿದ್ದಂತೆಯೇ ಸ್ಥಳದಲ್ಲಿದ್ದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


