ಲಂಚ ಸ್ವೀಕಾರ: ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ...!
ಲಂಚ ಸ್ವೀಕರಿಸುತ್ತಿದ್ದಾಗ ಬಿಬಿಎಂಪ ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಬಿಬಿಎಂಪ ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶಿವೇಗೌಡ. ವಿ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದ ಆರೋಗ್ಯ ವೈದ್ಯಾಧಿಕಾರಿ. ಶ್ರೀನಿವಾಸ್ ಎಂಬುವವರು ಸೊಳ್ಳೆ ನಿಯಂತ್ರಣಕ್ಕಾಗಿ ಟೆಂಡರ್ ಪಡೆದಿದ್ದರು. ಇದಕ್ಕಾಗಿ ವೈದ್ಯಾಧಿಕಾರಿ ಶಿವೇಗೌಡ ಅವರು, ಶ್ರೀನಿವಾಸ್ ಎಂಬುವವರು 80 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಶ್ರೀನಿವಾಸ್ ಅವರು ದೂರು ನೀಡಿದ್ದು, ಅದರಂತೆ ಶಿವೇಗೌಡ ಅವರು ಮುಂಗಡ ಹಣವಾಗಿ 30 ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶಿವೇಗೌಡ ಅವರನ್ನು ಹಲಸೂರಿನ ಕಚೇರಿಯಲ್ಲಿ ರೆಡ್ ಹ್ಯಾಂಡಾಗಿ ಲಂಚದ ಸಮೇತ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ. ಶಿವೇಗೌಡ ಅವರು, ಸಿವಿ ರಾಮನ್ ನಗರ ಬಿವಿಎಂಪಿ ಹೆಲ್ತ್ ಆಫೀಸರ್ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


