ರಾಜ್ಯ

ಕರ್ನಾಟಕ ಚುನಾವಣೆ 2023: ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾ ವೀಕ್ಷಕರ ನೇಮಕ: ಎಐಸಿಸಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕಾಂಗ್ರೆಸ್ ಪಕ್ಷ ನೂತನ ಜಿಲ್ಲಾ ವೀಕ್ಷಕರನ್ನು ಶುಕ್ರವಾರ ನೇಮಿಸಿದೆ.

ಕರ್ನಾಟಕ ಚುನಾವಣೆ 2023: ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾ ವೀಕ್ಷಕರ ನೇಮಕ: ಎಐಸಿಸಿ
ಕಾಂಗ್ರೆಸ್ ಚಿಹ್ನೆ
Published On :

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕಾಂಗ್ರೆಸ್ ಪಕ್ಷ ನೂತನ ಜಿಲ್ಲಾ ವೀಕ್ಷಕರನ್ನು ಶುಕ್ರವಾರ ನೇಮಿಸಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕರ್ನಾಟಕ ಕಾಂಗ್ರೆಸ್ ನ ನೂತನ ಜಿಲ್ಲಾ ವೀಕ್ಷಕರಾಗಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಶಕ್ತಿಸಿನ್ಹ ಗೋಹಿಲ್, ಆಂಧ್ರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ  ಹಾಗೂ ಸಂಸದ ಉತ್ತಮ್ ಕುಮಾರ್ ರೆಡ್ಡಿ ಮತ್ತು ರಾಯ್ ಗಂಜ್ ಕಾಂಗ್ರೆಸ್ ಸಂಸದೆ ದೀಪ್ ದಾಸ್ಮುನ್ಶಿ ಅವರನ್ನು ನೇಮಕ ಮಾಡಲಾಗಿದೆ.

ಶಕ್ತಿಸಿನ್ಹ ಗೋಹಿಲ್ ರನ್ನು ಕೋಲಾರ ಮತ್ತು ಚಿಕ್ಕಬಳ್ಳಾಪರದ ವೀಕ್ಷಕರನ್ನಾಗಿ ನೇಮಕ ಮಾಡಿದ್ದು, ಉತ್ತಮ್ ಕುಮಾರ್ ರೆಡ್ಡಿ ಅವರಿಗೆ ರಾಯಚೂರು ಮತ್ತು ದೀಪ್ ದಾಸ್ಮುನ್ಶಿ ಅವರನ್ನು ಶಿವಮೊಗ್ಗ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರು ಪ್ರಕಟಣೆ ಹೊರಡಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.