ರಾಜ್ಯ

ನಾಮಪತ್ರ ಹಿಂಪಡೆಯಲು ಜೆಡಿಎಸ್‌ ಅಭ್ಯರ್ಥಿಗೆ ಆಮಿಷ: ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ FIR

ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್‌ ಅಭ್ಯರ್ಥಿಗೆ ಆಮಿಷವೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ‌‌

ನಾಮಪತ್ರ ಹಿಂಪಡೆಯಲು ಜೆಡಿಎಸ್‌ ಅಭ್ಯರ್ಥಿಗೆ ಆಮಿಷ: ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ FIR
ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ
Published On :

ಬೆಂಗಳೂರು: ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್‌ ಅಭ್ಯರ್ಥಿಗೆ ಆಮಿಷವೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ‌‌

ನಾಮಪತ್ರ ವಾಪಸ್‌ ಪಡೆಯಲು ಜೆಡಿಎಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ (ಆಲೂರು ಮಲ್ಲು) ಅವರಿಗೆ ಆಮಿಷ ಒಡ್ಡಿರುವ ಆಡಿಯೊ ತುಣುಕಿಗೆ ಸಂಬಂಧಿಸಿದಂತೆ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಎಫ್‌ಐಆರ್‌ನಲ್ಲಿ ಸೋಮಣ್ಣ ಅವರಿಗೆ ಸಂಬಂಧಿಸಿದಂತೆ ವಿವರಗಳು ಇಲ್ಲ. ಅಪರಿಚಿತ (ಅನ್ನೌನ್‌) ಎಂದು ಉಲ್ಲೇಖಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಆಡಿಯೊದಲ್ಲಿ ಕೇಳಿ ಬಂದಿರುವ ಇನ್ನೆರಡು ಹೆಸರುಗಳಾದ ಸುದೀಪ್‌ ಮತ್ತು ನಟರಾಜು ಅವರ ವಿರುದ್ಧವೂ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಚುನಾವಣಾ ಫ್ಲೈಯಿಂಗ್‌ ಸ್ಕ್ಯಾಡ್‌ನ ಮ್ಯಾಜಿಸ್ಟ್ರೇಟ್‌ ಡಾ.ಬಿ.ಆರ್‌.ಜಯಣ್ಣ ಅವರು ನೀಡಿರುವ ದೂರಿನ ಆಧಾರದಲ್ಲಿ ಚಾಮರಾಜನಗರ ಪಟ್ಟಣ ಠಾಣೆಯ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.  ಮೂಲಗಳ ಪ್ರಕಾರ ಎಫ್ ಐಆರ್ ನಲ್ಲಿ ಉಲ್ಲೇಖವಾಗಿರುವಂತೆ ವಿ ಸೋಮಣ್ಣ ಅವರನ್ನು ಮೊದಲ ಆರೋಪಿ ಎಂದು ಉಲ್ಲೇಖಿಸಲಾಗಿದ್ದು, ನಟರಾಜು ಅವರು ಎರಡನೇ ಮತ್ತು ಸುದೀಪ್‌ ಮೂರನೇ ಆರೋಪಿಯಾಗಿದ್ದಾರೆ. 

ನಾಮಪತ್ರ ವಾಪಸ್‌ ಪಡೆಯುವ ದಿನದಂದು ಸಚಿವ, ಬಿಜೆಪಿ ಅಭ್ಯರ್ಥಿ ಸೋಮಣ್ಣ ಅವರು ಜೆಡಿಎಸ್‌ನ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಕರೆ ಮಾಡಿ ನಾಮಪತ್ರ ವಾಪಸ್‌ ತೆಗೆದುಕೊಳ್ಳುವಂತೆ ಸೂಚಿಸಿದ್ದರು ಎನ್ನಲಾಗಿದೆ.

ಇಷ್ಟಕ್ಕೂ ಆಡಿಯೋದಲ್ಲೇನಿತ್ತು?
ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿ (ಆಲೂರು ಮಲ್ಲು) ಅವರಿಗೆ ಸೋಮಣ್ಣ ಕರೆ ಮಾಡಿ ನಾಮಪತ್ರ ವಾಪಸ್ ಪಡೆಯುವಂತೆ ಹೇಳುವ ಆಡಿಯೊ ತುಣುಕು ವಾಟ್ಸ್ ಆ್ಯಪ್ ನಲ್ಲಿ ಹರಿದಾಡುತ್ತಿದೆ. ‘ಸರ್ಕಾರದ ಬರುತ್ತದೆ. ಗೂಟದ ಕಾರು ಕೊಡುತ್ತೇವೆ’ ಎಂದು ಹೇಳಿದ್ದ ಆಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಸೋಮಣ್ಣ ಅವರು ಕರೆ ಮಾಡಿದ್ದನ್ನು ಮಲ್ಲಿಕಾರ್ಜುನ ಸ್ವಾಮಿ ಅವರು ದೃಢಪಡಿಸಿದ್ದರು.

'ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಿನಗೆ ಗೂಟದ ಕಾರು ಕೋಡ್ತೀವಿ. ಮೊದಲು ವಾಪಸ್ ತಗೊ. 'ತೊಟ್ಟಿ ನನ್ನ ಮಗನ ಮಾತು ಕೇಳಿ ನಿತ್ತಿದ್ದೀಯಾ. ಮೊದಲು ತೆಗಿ. ಆಮೇಲೆ ಎಲ್ಲ ಮಾತನಾಡೋಣ. ನಿನ್ನ ಬದುಕಿಗೆ ಏನು ಬೇಕೋ ಅದು ಮಾಡ್ತೇನೆ. ಹಿತ ಕಾಪಾಡ್ತೇನೆ' ಎಂದು ಸೋಮಣ್ಣ ಹೇಳಿರುವುದು ಆಡಿಯೊದಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.