ವಿವಿ ಸಾಂಸ್ಕೃತಿಕ ಉತ್ಸವದ ವೇಳೆ 2 ಗುಂಪುಗಳ ನಡುವೆ ಘರ್ಷಣೆ: ಹೊಡೆದಾಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು
ಕ್ಷುಲ್ಲಕ ಕಾರಣಕ್ಕೆ ನಗರದ ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಸಾಂಸ್ಕೃತಿ ಉತ್ಸವದ ವೇಳೆ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ಎದುರಾಗಿದ್ದು, ಈ ಗಲಾಟೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನಗರದ ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಸಾಂಸ್ಕೃತಿ ಉತ್ಸವದ ವೇಳೆ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ಎದುರಾಗಿದ್ದು, ಈ ಗಲಾಟೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ರೇವೇ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ 4ನೇ ವರ್ಷದ ಮೆಕ್ಯಾನಿಕಲ್ ವಿದ್ಯಾರ್ಥಿ ಭಾಸ್ಕರ್ ಜಟ್ಟಿ (22) ಮೃತ ದುರ್ದೈವಿ.
ಮೂಲಗಳ ಪ್ರಕಾರ, ಶುಕ್ರವಾರ ರಾತ್ರಿ 9.30 ರ ಸುಮಾರಿಗೆ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ನೋಡ ನೋಡುತ್ತಿದ್ದಂತೆಯೇ ಗಲಾಟೆ ವಿಕೋಪಕ್ಕೆ ತಿರುಗಿದೆ. ಗುಜರಾತ್ ಮೂಲದ ಭಾಸ್ಕರ್ ಜಟ್ಟಿ ಹೊಟ್ಟೆಗೆ ಹಲವು ಬಾರಿ ಇರಿಯಲಾಗಿದೆ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಆರೋಪಿಗಳ ಬಂಧನಕ್ಕಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಈಶಾನ್ಯ ಡಿಸಿಪಿ ಲಕ್ಷ್ಮಿ ಪ್ರಸಾದ್ ಅವರು ಹೇಳಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ ಎದುರಾಗಿದೆ. ಆದರೆ, ನಿಖರವಾದ ಕಾರಣವೇನು ಎಂಬುದರ ಕುರಿತು ವಿವರಗಳು ಲಭ್ಯವಾಗಿಲ್ಲ.
ವಿದ್ಯಾರ್ಥಿಯೊಬ್ಬರು ಪ್ರತಿಕ್ರಿಯೆ ನೀಡಿ, ಫೋಟೋ ವಿಚಾರಕ್ಕೆ ಮಾತಿನ ಚಕಮಕಿ ಶುರುವಾಗಿತ್ತು. ನಂತರ ಇದೇ ದೊಡ್ಡ ಜಗಳಕ್ಕೆ ಕಾರಣವಾಯಿತು. ಈ ಘರ್ಷಣೆಯಲ್ಲಿ ಜಟ್ಟಿ ಭಾಗಿಯಾಗಿರಲಿಲ್ಲ. ಜಗಳ ಬಿಡಿಸಲಷ್ಟೇ ಆತ ಮುಂದೆ ಹೋಗಿದ್ದ ಎಂದು ಹೇಳಿದ್ದಾರೆ.
ಏತನ್ಮಧ್ಯೆ, ವಿದ್ಯಾರ್ಥಿ ಜಟ್ಟಿಯ ಮೃತದೇಹವನ್ನು ಶವಾಗಾರಕ್ಕೆ ವರ್ಗಾಯಿಸಲಾಗಿದ್ದು, ಅಲ್ಲಿ ಶವಪರೀಕ್ಷೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


