ಕಲುಷಿತ ನೀರು ಸೇವಿಸಿ 21 ಮಂದಿ ಅಸ್ವಸ್ಥ ಪ್ರಕರಣ: ಗ್ರಾಮ ಪಂಚಾಯತ್ ಪಿಡಿಒ ಅಮಾನತು
ಕಲುಷಿತ ನೀರು ಸೇವಿಸಿ 21 ಜನ ಅಸ್ವಸ್ಥಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಟನಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವೆಂದ್ರಪ್ಪ ಅವರನ್ನು ಅಮಾನತು ಮಾಡಿ ತಾಲೂಕು ಪಂಚಾಯತಿ ಸಿಇಒ ಮಾಣಿಕ್ ರಾವ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಬೀದರ್: ಕಲುಷಿತ ನೀರು ಸೇವಿಸಿ 21 ಜನ ಅಸ್ವಸ್ಥಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಟನಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವೆಂದ್ರಪ್ಪ ಅವರನ್ನು ಅಮಾನತು ಮಾಡಿ ತಾಲೂಕು ಪಂಚಾಯತಿ ಸಿಇಒ ಮಾಣಿಕ್ ರಾವ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಬೀದರ್ ತಾಲ್ಲೂಕಿನ ಚಟನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬರೀದಾಬಾದ ಗ್ರಾಮದಲ್ಲಿ ಚರಂಡಿ ಕಾಮಗಾರಿಯನ್ನು ಕೈಗೊಂಡಿದ್ದರು. ಈ ವಿಚಾರವನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ಥಳೀಯ ಅಧಿಕಾರಿಗಳ ತಿಳಿಸದೆ ಕಾಮಗಾರಿ ಕೈಗೊಂಡಿದ್ದಾರೆ. ಈ ಕಾಮಗಾರಿಯನ್ನು ಕುಡಿಯುವ ನೀರಿನ ಪೈಪ್‌ಲೈನ್ ಹಾದು ಹೋದ ದಾರಿಯಲ್ಲೇ ನಡೆದಿದೆ.
ಇದರಿಂದ ಕುಡಿಯುವ ನೀರಿನ ಪೈಪ್ಲೈನ್ಗೆ ಹಾನಿಯಾಗಿ ಜು. 25 ರಂದು ಚರಂಡಿಯ ಕಲುಷಿತ ನೀರು ಪೈಪ್‌ಲೈನ್ ನೀರಿಗೆ ಸೇರಿದೆ. ಇದೇ ನೀರನ್ನು ಕುಡಿದು 21 ಜನರು ಅಸ್ವಸ್ಥಗೊಂಡಿದ್ದಾರೆ.
ಇವರನ್ನು ಕೂಡಲೇ ಜಿಲ್ಲಾ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 11 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಉಳಿದ 10 ಜನ ಬೀದರ್ ನ ವಾಸು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜು.25 ರಂದು ಘಟನೆ ನಡೆದಿದ್ದು, ಗ್ರಾಮ ಪಂಚಾಯತಿ ಪಿಡಿಒ ದೇವೆಂದ್ರಪ್ಪ ತಾಲೂಕು ಪಂಚಾಯತಿ ಸಿಇಒ ಮಾಣಿಕ್ ರಾವ್ ಪಾಟೀಲ್ ಅವರಿಗೆ ಕೂಡಲೇ ವರದಿ ನೀಡದೆ ಜು.28 ರಂದು ಸಾಯಂಕಾಲ 5:30 ಕ್ಕೆ ತಡವಾಗಿ ವರದಿ ನೀಡಿದ್ದಾರೆ. ಇದರಂತೆ ಕರ್ತವ್ಯ ಲೋಪ ಎಸಗಿದ್ದಾರೆಂದು ಪಿಡಿಒ ದೇವೆಂದ್ರಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


