ಸಿಬಿಎಸ್‌ಸಿ, ಐಸಿಎಸ್‌ಸಿ ಶಾಲೆಗಳ ಮೇಲೆ ಕನ್ನಡ ಹೇರಿಕೆ: ರಾಜ್ಯ, ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ವಿಷಯವಾಗಿ ಹೇರಿರುವ ವಿಚಾರ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ವಿಷಯವಾಗಿ ಹೇರಿರುವ ವಿಚಾರ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಿ ಸೋಮಶೇಖರ್ ಮತ್ತು ಇತರ 19 ಮಂದಿ ವಿವಿಧ ಸಿಬಿಎಸ್‌ಸಿ, ಐಸಿಎಸ್‌ಸಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಪೋಷಕರು ಮತ್ತು ಶಿಕ್ಷಕರು ಈ ಕುರಿಸು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಈ ಹಂತದಲ್ಲಿ ಯಾವುದೇ ಮಧ್ಯಂತರ ಆದೇಶವನ್ನು ನೀಡಲು ನಿರಾಕರಿಸಿತು ಮತ್ತು ವಿಚಾರಣೆಯನ್ನು ಎರಡು ವಾರಗಳಿಗೆ ಮುಂದೂಡಿತು.
ಕರ್ನಾಟಕ ಭಾಷಾ ಕಲಿಕೆ ಕಾಯ್ದೆ, ನಿಯಮಗಳು ಮತ್ತು ಎನ್‌ಒಸಿ ನಿಯಮಗಳ ನಿಬಂಧನೆಗಳ ಸಂಯೋಜಿತ ಪರಿಣಾಮವೆಂದರೆ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಮಂಡಳಿಗಳೊಂದಿಗೆ ಸಂಯೋಜಿತವಾಗಿರುವ ರಾಜ್ಯದ ಶಾಲೆಗಳು ಕನ್ನಡವನ್ನು ಪ್ರಥಮ, ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕಲಿಸಬೇಕಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


