ರಾಜ್ಯ

ಉಡುಪಿ ಕಾಲೇಜು ವಿಡಿಯೋ ರೆಕಾರ್ಡ್ ಪ್ರಕರಣ: ನ್ಯಾಯಾಲಯದಲ್ಲಿ ಸಂತ್ರಸ್ತ ವಿದ್ಯಾರ್ಥಿನಿ ಹೇಳಿಕೆ

ವಿವಾದಿತ ಉಡುಪಿ ಕಾಲೇಜು ವಾಶ್‌ರೂಮ್ ವಿಡಿಯೋ ರೆಕಾರ್ಡ್ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿ ಗುರುವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಉಡುಪಿ ಕಾಲೇಜು ವಿಡಿಯೋ ರೆಕಾರ್ಡ್ ಪ್ರಕರಣ: ನ್ಯಾಯಾಲಯದಲ್ಲಿ ಸಂತ್ರಸ್ತ ವಿದ್ಯಾರ್ಥಿನಿ ಹೇಳಿಕೆ
ಸಾಂದರ್ಭಿಕ ಚಿತ್ರ
Published On :

ಉಡುಪಿ: ವಿವಾದಿತ ಉಡುಪಿ ಕಾಲೇಜು ವಾಶ್‌ರೂಮ್ ವಿಡಿಯೋ ರೆಕಾರ್ಡ್ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿ ಗುರುವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜುಲೈ 18ರಂದು ಈ ಘಟನೆ ಸಂಭವಿಸಿದ್ದು, ಮೂವರು ಮುಸ್ಲಿಂ ಹುಡುಗಿಯರು ಸಂತ್ರಸ್ತೆ ವಾಶ್‌ರೂಮ್‌ಗೆ ತೆರಳಿದಾಗ ವಿಡಿಯೋ ರೆಕಾರ್ಡ್ ಮಾಡಿದ್ದರು.

ಈ ಘಟನೆ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿತ್ತು.

ನ್ಯಾಯಾಲಯದ ಮುಂದೆ ಸಂತ್ರಸ್ತ ವಿದ್ಯಾರ್ಥಿನಿ ಘಟನೆಗೆ ಸಂಬಂಧಿಸಿದ ಮಾಹಿತಿಯನ್ನು ವಿವರಿಸಿದ್ದಾಳೆ. ನ್ಯಾಯಾಲಯವು ಆಕೆಯ ಹೇಳಿಕೆಯನ್ನು ಎಚ್ಚರಿಕೆಯಿಂದ ದಾಖಲಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಮೂವರು ಆರೋಪಿಗಳ ವಿರುದ್ಧ ಔಪಚಾರಿಕ ದೂರು ದಾಖಲಿಸಲು ಸಂತ್ರಸ್ತೆಗೆ ಇಷ್ಟವಿರಲಿಲ್ಲ. ಆದರೆ, ಘಟನೆ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

ತನಿಖೆ ಸಮಯದಲ್ಲಿ ಬಂಧನದಿಂದ ತಪ್ಪಿಸಿಕೊಳ್ಳಲು ಎಲ್ಲಾ ಮೂವರು ಆರೋಪಿ ವಿದ್ಯಾರ್ಥಿನಿಯರು ಈಗಾಗಲೇ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.