ಬೆಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಹದೇವಪುರ ರೆವಿನ್ಯೂ ಇನ್ಸ್ ಪೆಕ್ಟರ್
5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಬಿಎಂಪಿ ಕಂದಾಯ ನಿರೀಕ್ಷಕ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು : 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಬಿಎಂಪಿ ಕಂದಾಯ ನಿರೀಕ್ಷಕ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಹದೇವಪುರ ಆರ್ ಒ ನಟರಾಜ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ನಟರಾಜ್ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಸರ್ಚ್ ನಡೆದಿದೆ. ಸರ್ಚ್ ವಾರೆಂಟ್ ಪಡೆದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ದಾಳಿ ವೇಳೆ ಅಪಾರ ಪ್ರಮಾಣದ ವಸ್ತುಗಳು ಪತ್ತೆಯಾಗಿದ್ದು, 900 ಗ್ರಾಂ ಚಿನ್ನಾಭರಣ ಮತ್ತು 7 ಕೆಜಿ ಬೆಳ್ಳಿ ವಸ್ತುಗಳು ಪತ್ತೆಯಾಗಿದೆ. 4 ಕಾರು (ಇನ್ನೋವಾ ಕ್ರಿಸ್ಟಾ, ಕಿಯಾ ಸೋನೆಟ್, ಹುಂಡೈ ವರ್ನಾ, ಆಡಿ ಕ್ಯೂ-3), 80,000 ನಗದು ಪತ್ತೆಯಾಗಿದೆ.
ಆವಲಳ್ಳಿ ಗಿರಿನಗರದಲ್ಲಿ 30×40 ಅಳತೆಯಲ್ಲಿ ಐಷಾರಾಮಿ ಮನೆಯಿದ್ದು, ಕೊಡಿಗೇಹಳ್ಳಿಯಲ್ಲಿ ಪತ್ನಿ ಹೆಸರಲ್ಲಿ 40×60 ನಿವೇಶನ ದಾಖಲೆಗಳು ಪತ್ತೆಯಾಗಿದೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ಮಂಜನಾಥ್ ಹೂಗಾರ್ ನೇತೃತ್ವದಲ್ಲಿ ದಾಳಿ ನಡೆದಿತ್ತು. ಖಾಸಗಿ ವ್ಯಕ್ತಿ ಪವನ್ ಮೂಲಕ ಲಂಚ ಸ್ವೀಕರಿಸುತ್ತಿದ್ದರು .
ಇನ್ನು ನಟರಾಜ್ ಫ್ಲ್ಯಾಟ್ ಖಾತೆ ಮಾಡಿಕೊಡಲು 1 ಫ್ಲ್ಯಾಟ್ಗೆ 10 ಸಾವಿರದಂತೆ 79 ಫ್ಲ್ಯಾಟ್ ಗೆ 7.90 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಅದರಂತೆ ಮುಂಗಡವಾಗಿ 5 ಲಕ್ಷ ರೂ. ಲಂಚ ಪಡೆಯುವಾಗ ಬಿಬಿಎಂಪಿ ಆರ್ಐ ನಟರಾಜ್, ಆರೋಪಿ ಪವನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಜುನಾಥ್ ಎಂಬುವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಟರಾಜ್ ಅವರನ್ನು ಟ್ರ್ಯಾಪ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


