ಬೆಂಗಳೂರು: ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ, ಆಸ್ಪತ್ರೆಗೆ ದಾಖಲು
ವೃಕ್ಷಮಾತೆ ಎಂದೇ ಖ್ಯಾತಿ ಪಡೆದಿರುವ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರು ಭಾನುವಾರ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ವೃಕ್ಷಮಾತೆ ಎಂದೇ ಖ್ಯಾತಿ ಪಡೆದಿರುವ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರು ಭಾನುವಾರ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ಇಂದು ಸಂಜೆ 4.30ರ ಸುಮಾರಿಗೆ ಬೆಂಗಳೂರಿನ ಮಂಜುನಾಥನಗರದಲ್ಲಿರುವ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ.
112 ವರ್ಷದ ಸಾಲುಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಬೆನ್ನಿನ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ, ಉಳಿದಂತೆ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕೌಟುಂಬಿಕ ಮೂಲಗಳಿಂದ ತಿಳಿದು ಬಂದಿದೆ.
ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರು ಪರಿಸರದ ಮೇಲಿನ ತಮ್ಮ ಪ್ರೀತಿಯಿಂದ ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತಿ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


