ಸ್ಪಂದನಾ ಮರಣೋತ್ತರ ಪರೀಕ್ಷೆ ಮುಗಿದಿದೆ, ನಾಳೆ ರಾತ್ರಿ ಬೆಂಗಳೂರಿಗೆ ಮೃತದೇಹ ತಲುಪಲಿದೆ: ಬಿಕೆ ಹರಿಪ್ರಸಾದ್
ಥೈಲ್ಯಾಂಡ್ನಲ್ಲಿ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಮುಗಿದಿದೆ ಎಂದು ಸ್ಪಂದನಾ ಅವರ ಚಿಕ್ಕಪ್ಪನೂ ಆಗಿರುವ...

ಬ್ಯಾಂಕಾಕ್: ಥೈಲ್ಯಾಂಡ್ನಲ್ಲಿ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಮುಗಿದಿದೆ ಎಂದು ಸ್ಪಂದನಾ ಅವರ ಚಿಕ್ಕಪ್ಪನೂ ಆಗಿರುವ ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರು ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಕೆ.ಹರಿಪ್ರಸಾದ್ ಅವರು, ನಾಳೆ ರಾತ್ರಿ ಬೆಂಗಳೂರಿಗೆ ಸ್ಪಂದನಾ ಮೃತದೇಹ ತಲುಪಲಿದೆ. ಬುಧವಾರ ಸ್ಪಂದನಾ ಅಂತ್ಯ ಸಂಸ್ಕಾರ ನೆರವೇರಲಿದೆ. ಅಂತ್ಯಕ್ರಿಯೆಯ ಸ್ಥಳದ ಬಗ್ಗೆ ವಿಜಯ್ ರಾಘವೇಂದ್ರ ಅವರ ತೀರ್ಮಾನವೇ ಅಂತಿಮ ಎಂದರು.
ನಟ ವಿಜಯ್ ರಾಘವೇಂದ್ರ ಅವರು ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸ್ಪಂದನಾ ಅವರು ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿ ಆಗದೆ ನಿಧನರಾಗಿದ್ದಾರೆ.
ಸ್ಪಂದನಾ ಹಾಗೂ ವಿಜಯ ರಾಘವೇಂದ್ರ 26 ಆಗಸ್ಟ್ 2007ರಂದು ಮದುವೆ ಆಗಿದ್ದರು. ಸ್ಪಂದನಾ ತಂದೆ ನಿವೃತ್ತ ಸಹಾಯಕ ಕಮಿಷನರ್ ಬಿಕೆ ಶಿವರಾಮ್ ಅವರ ಪುತ್ರಿ. ದಂಪತಿಗೆ ಶೌರ್ಯ ಎಂಬ ಮಗ ಇದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


