ರಾಜ್ಯ

ಹೃದಯಾಘಾತದಿಂದ ಸ್ಪಂದನಾ ವಿಜಯ್ ರಾಘವೇಂದ್ರ ನಿಧನ: ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರ ಸಂತಾಪ

ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಹೃದಯಾಘಾತದಿಂದ ಸ್ಪಂದನಾ ವಿಜಯ್ ರಾಘವೇಂದ್ರ ನಿಧನ: ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರ ಸಂತಾಪ
ಸ್ಪಂದನಾ ವಿಜಯ ರಾಘವೇಂದ್ರ
Published On :

ಬೆಂಗಳೂರು: ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪಂದನಾ ಅವರ ಅಗಲಿಕೆ ಸುದ್ದಿ ಆಘಾತವನ್ನುಂಟು ಮಾಡಿರುವುದಾಗಿ ತಿಳಿಸಿದ್ದಾರೆ.

ಸ್ಪಂದನ ನಿಧನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ತೀರಾ ಇತ್ತೀಚೆಗಷ್ಟೆ ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ನನ್ನನ್ನು ಭೇಟಿ ಮಾಡಿದ್ದರು. ಈಗ ಅವರು ಇಲ್ಲ ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟವಾಗುತ್ತಿದೆ. ಅವರದ್ದು ಸಾಯುವ ವಯಸ್ಸಲ್ಲ. ಮನುಷ್ಯನ ಜೀವನ ಎಷ್ಟು ಅನಿಶ್ಚಿತ ಎಂಬುದಕ್ಕೆ ಈ ಅಗಲಿಕೆಯೂ ಸಾಕ್ಷಿಯಾಗಿದೆ ಎಂದು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯಸಭಾ ಸದಸ್ಯ ಜಗ್ಗೇಶ್ ಸೇರಿದಂತೆ ಹಲವು ಗಣ್ಯರು ಸ್ಪಂದನಾ ವಿಜಯ್ ರಾಘವೇಂದ್ರ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.