ಬೆಂಗಳೂರು: ಒಲ್ಲದ ಮದುವೆ, ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ!
ವಿಜಯನಗರ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಚಂದ್ರಾ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ವಿಜಯನಗರ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಚಂದ್ರಾ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಹಾಸನ ಮೂಲದ ನವೀನ್ ಕುಮಾರ್ ಎಂದು ಗುರುತಿಸಲಾಗಿದ್ದು, ಬಿಸಿಸಿ ಲೇಔಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. 2009ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು.
ನವೀನ್ ಕುಮಾರ್ ಶುಕ್ರವಾರ ಕೆಲಸಕ್ಕೆ ಹೋಗಿರಲಿಲ್ಲ ಮತ್ತು ಅವರ ಕುಟುಂಬ ಸದಸ್ಯರುಮತ್ತು ಸಹೋದ್ಯೋಗಿಗಳು ಫೋನ್ ಮಾಡಿದ್ದಾರೆ, ಆದರೆ ಯಾವುದೇ ಫೋನ್ ಕರೆಗಳಿಗೆ ಉತ್ತರಿಸಲಿಲ್ಲ, ಹೀಗಾಗಿ ಆತನ ಕುಟುಂಬಸ್ಥರು ಮನೆ ಮಾಲೀಕರನ್ನು ಸಂಪರ್ಕಿಸಿ ಪರಿಶೀಲಿಸುವಂತೆ ಮನವಿ ಮಾಡಿದ್ದು, ಶನಿವಾರ ಮನೆ ಮಾಲೀಕರು ಆತನ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಮದ್ಯದಲ್ಲಿ ವಿಷ ಬೆರೆಸಿ ನವೀನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ . ಆಗಸ್ಟ್ 24 ರಂದು ನವೀನ್ ಮದುವೆಯನ್ನು ನಿಗದಿಪಡಿಸಲಾಗಿತ್ತು. ಮದುವೆಗಾಗಿ ಹೊಸ ಬಟ್ಟೆಸಹ ಖರೀದಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.
ಆದರೆ, ತಾನು ಮದುವೆಯಾಗುವುದಾಗಿ ತನ್ನ ಸಹೋದ್ಯೋಗಿಗಳ ಬಳಿ ಹೇಳಿರಲಿಲ್ಲ. ಅವರು ಮದುವೆಯಾಗಲು ಸಿದ್ಧರಿಲ್ಲ ಅಥವಾ ಕೆಲವು ಕೌಟುಂಬಿಕ ಸಮಸ್ಯೆಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಹೀಗಾಗಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿಯಲು ತನಿಖೆ ನಡೆಸುತ್ತಿದ್ದೇವೆ ಎಂದು ಚಂದ್ರಾ ಲೇಔಟ್ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


