ದೇವನಹಳ್ಳಿ: ಡಿಪೋ ಎದುರೆ ಬಿಎಂಟಿಸಿ ಚಾಲಕ ಆತ್ಮಹತ್ಯೆ
ಬಿಎಂಟಿಸಿ ಚಾಲಕರೊಬ್ಬರು ದೇವನಹಳ್ಳಿಯ ಡಿಪೋದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೇವನಹಳ್ಳಿ: ಬಿಎಂಟಿಸಿ ಚಾಲಕರೊಬ್ಬರು ದೇವನಹಳ್ಳಿಯ ಡಿಪೋದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತನನ್ನು ದೇವನಹಳ್ಳಿಯ ತಾಲೂಕಿನ ಆವತಿ ಮೂಲದ 45 ವರ್ಷದ ನಾಗೇಶ್ ಎಂದು ತಿಳಿದುಬಂದಿದೆ. ಬಿಎಂಟಿಸಿಯಲ್ಲಿ ನಾಗೇಶ್ ಚಾಲಕ ಕಂ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದು,ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದರು. ಜತೆಗೆ ಕೆಲಸದ ಸ್ಥಳದಲ್ಲಿ ಕಿರುಕುಳ ಹೆಚ್ಚಾಗಿತ್ತು ಎನ್ನಲಾಗಿದೆ.
ಇನ್ನು ನಿನ್ನೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ನಾಗೇಶ್, ಮತ್ತೆ ಮಧ್ಯರಾತ್ರಿ ಡಿಪೋಗೆ ಬಂದು ಡಿಪೋ ಮ್ಯಾನೆಜರ್ ಕೊಠಡಿ ಎದುರಿಗೆ ಇರುವ ಕಾಂಪೌಂಡ್‌ನ ಮೇಲಿದ್ದ ಕಂಬಿಗೆ ಹಗ್ಗದಿಂದ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ಸಿಬ್ಬಂದಿ ದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


