ರಾಜ್ಯ

ಬೆಂಗಳೂರು: ಬಾಲಕಿ ಎದುರೇ ಹಸ್ತಮೈಥುನ ಮಾಡಿಕೊಂಡಿದ್ದ ವ್ಯಕ್ತಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ!

ಬಾಲಕಿ ಎದುರೇ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಂಡಿದ್ದಕ್ಕಾಗಿ 33 ವರ್ಷದ ವ್ಯಕ್ತಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನಗರದ 1ನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ ಹೊರಡಿಸಿದೆ.

ಬೆಂಗಳೂರು: ಬಾಲಕಿ ಎದುರೇ ಹಸ್ತಮೈಥುನ ಮಾಡಿಕೊಂಡಿದ್ದ ವ್ಯಕ್ತಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬಾಲಕಿ ಎದುರೇ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಂಡಿದ್ದಕ್ಕಾಗಿ 33 ವರ್ಷದ ವ್ಯಕ್ತಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನಗರದ 1ನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ ಹೊರಡಿಸಿದೆ.

2020ರಲ್ಲಿ ಆರೋಪಿ ಬಾಲಕಿ ಮುಂದೆ ಹಸ್ತಮೈಥುನ ಮಾಡಿಕೊಂಡಿದ್ದ. ಈ ಸಂಬಂಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರಾದ ರೂಪಾ ಕೆಎನ್, ಎಚ್ ರಹಮತ್ ಉಲ್ಲಾ ಬೇಗ್‌ ಅನ್ನು ಲೈಂಗಿಕ ಕಿರುಕುಳದ ಅಪರಾಧಿ ಎಂದು ಘೋಷಿಸಿದರು ಮತ್ತು ಆತನಿಗೆ 20,000 ರೂ. ದಂಡ ವಿಧಿಸಿದ್ದಾರೆ.

13 ವರ್ಷದ ಬಾಲಕಿ ಬೆಂಗಳೂರಿನಲ್ಲಿ 2020ರ ಫೆಬ್ರುವರಿಯಲ್ಲಿ ತನ್ನ ಸಾಕುನಾಯಿಯನ್ನು ಕರೆದುಕೊಂಡು ವಾಕಿಂಗ್ ಮಾಡುತ್ತಿದ್ದ ವೇಳೆ, ಬಾಲಕಿ ಎದುರೇ ರಹಮತ್ ಉಲ್ಲಾ ಹಸ್ತಮೈಥುನ ಮಾಡಿಕೊಂಡಿದ್ದ. 

ಇದರಿಂದ ಹೆದರಿದ ಬಾಲಕಿ ಮನೆಗೆ ಹಿಂತಿರುಗಲು ಮುಂದಾದಾಗ, ಆಕೆಯನ್ನು ಆತ ಹಿಂಬಾಲಿಸಿದ್ದ ಮತ್ತು ಅಸಭ್ಯವಾಗಿ ವರ್ತಿಸಿದ್ದ.
ಬಾಲಕಿ ತಂದೆ ಅದೇ ದಿನ ಪೊಲೀಸರಿಗೆ ದೂರು ದಾಖಲಿಸಿದರು. ಆರೋಪಿ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅದಾದ ಕೆಲವು ದಿನಗಳ ನಂತರ ಫೆಬ್ರುವರಿ 13 ರಂದು ಆರೋಪಿಯನ್ನು ಬಂಧಿಸಿದ್ದರು.

ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಆರೋಪಿಯನ್ನು ಗುರುತಿಸಲಾಗಿದ್ದು, ವಿಚಾರಣೆಯಲ್ಲಿ ಆತನ ವಿರುದ್ಧ ಸಾಕ್ಷ್ಯವಾಗಿ ಬಳಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.