ಬೆಂಗಳೂರು: NIA ದಾಳಿ ವೇಳೆ ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳು ಬಂಧನ
ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬೆಂಗಳೂರಿನಲ್ಲಿ ಅಕ್ರಮವಾಗಿ ತಂಗಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಶೋಧ ಕಾರ್ಯಾಚರಣೆಯಲ್ಲಿ ಪತ್ತೆ ಹಚ್ಚಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬೆಂಗಳೂರಿನಲ್ಲಿ ಅಕ್ರಮವಾಗಿ ತಂಗಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಶೋಧ ಕಾರ್ಯಾಚರಣೆಯಲ್ಲಿ ಪತ್ತೆ ಹಚ್ಚಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎನ್‌ಐಎ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದರು. ಈ ವೇಳೆ ವಿಚಾರಣೆ ನಡೆಸಿದಾಗ, ಬೆಳ್ಳಂದೂರು ಪ್ರದೇಶದ ವಸತಿ ಪ್ರದೇಶದಲ್ಲಿ ಮೂವರು ಬಾಂಗ್ಲಾದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ.
ಅಕ್ರಮ ವಲಸಿಗರನ್ನು ಖಲೀಲ್ ಚಪರಾಸಿ, ಅಬ್ದುಲ್ ಖದೀರ್ ಮತ್ತು ಮೊಹಮ್ಮದ್ ಜಹೀದ್ ಎಂದು ಗುರುತಿಸಲಾಗಿದೆ. ಇವರೆಲ್ಲರನ್ನೂ ಎನ್‌ಐಎ ವಶಕ್ಕೆ ಪಡೆದು ಬೆಳ್ಳಂದೂರು ಠಾಣೆ ಪೊಲೀಸರಿಗೆ ಹಸ್ತಾಂತರಿಸಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


