ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಂಚಭೂತಗಳಲ್ಲಿ ಲೀನ
ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್ನಲ್ಲಿ...

ಬೆಂಗಳೂರು: ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್ನಲ್ಲಿ ನೆರವೇರಿಸಲಾಗಿದ್ದು, ಪಂಚಭೂತಗಳಲ್ಲಿ ಲೀನವಾಗಿದ್ದಾರೆ.
ಇದನ್ನು ಓದಿ: ಚಿರನಿದ್ರೆಗೆ ಜಾರಿದ ಸ್ಪಂದನ: ಪತಿ ವಿಜಯ್ ರಾಘವೇಂದ್ರ, ಕುಟುಂಬಸ್ಥರು, ರಾಜಕಾರಣಿಗಳು, ಕಲಾವಿದರಿಂದ ಅಶ್ರುತರ್ಪಣ
ಇಂದು ಸಂಜೆ ಹರಿಶ್ಚಂದ್ರಘಾಟ್ನಲ್ಲಿ ಈಡಿಗ ಬಿಲ್ಲವ ಸಮುದಾಯದ ಸಂಪ್ರದಾಯದಂತೆ ಸ್ಪಂದನಾ ಅವರ ಅಂತ್ಯಕ್ರಿಯೆ ನಡೆದಿದ್ದು, ಪತಿ ವಿಜಯ್ ರಾಘವೇಂದ್ರ ಹಾಗೂ ಪುತ್ರ ಶೌರ್ಯ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.
ಕುಟುಂಬಸ್ಥರು, ಹಲವು ಗಣ್ಯರು ಸ್ಪಂದನಾಗೆ ಕಣ್ಣೀರಿನ ವಿದಾಯ ಹೇಳಿದರು.
ಮಲ್ಲೇಶ್ವರಂನಿಂದ ಹರಿಶ್ಚಂದ್ರಘಾಟ್ವರೆಗೆ ಸ್ಪಂದನಾ ಅವರ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು. ಅಂತಿಮಯಾತ್ರೆಯ ವೇಳೆ ರಸ್ತೆಯುದ್ದಕ್ಕೂ ನೂರಾರು ಜನ ಸ್ಪಂದನಾ ಅವರ ಅಂತಿಮದರ್ಶನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


