ರಾಜ್ಯ

ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ: ನಾಳೆಯಿಂದ ಆ.14ರ ವರೆಗೆ ನೇರಳೆ ಮಾರ್ಗದಲ್ಲಿ 2 ಗಂಟೆ ಸಂಚಾರ ಸ್ಥಗಿತ

ನಾಳೆಯಿಂದ ಆಗಸ್ಟ್ 14ರ ವರೆಗೆ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ನೇರಳೆ ಮಾರ್ಗದಲ್ಲಿ ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ರೈಲು ಸಂಚಾರ ಸ್ಥಗಿತಗೊಳಿಸಲಾಗುವುದು ಎಂದು ಬುಧವಾರ...

ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ: ನಾಳೆಯಿಂದ ಆ.14ರ ವರೆಗೆ ನೇರಳೆ ಮಾರ್ಗದಲ್ಲಿ 2 ಗಂಟೆ ಸಂಚಾರ ಸ್ಥಗಿತ
ಕೆ ಆರ್ ಪುರ-ಬೈಯಪ್ಪನಹಳ್ಳಿ ಮಧ್ಯೆ ಪ್ರಾಯೋಗಿಕ ಮೆಟ್ರೊ ಸಂಚಾರ
Published On :

ಬೆಂಗಳೂರು: ನಾಳೆಯಿಂದ ಆಗಸ್ಟ್ 14ರ ವರೆಗೆ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ನೇರಳೆ ಮಾರ್ಗದಲ್ಲಿ ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ರೈಲು ಸಂಚಾರ ಸ್ಥಗಿತಗೊಳಿಸಲಾಗುವುದು ಎಂದು ಬುಧವಾರ ಬಿಎಂಆರ್​ಸಿಎಲ್​ ತಿಳಿಸಿದೆ.

ಬೈಯಪ್ಪನಹಳ್ಳಿಯಿಂದ ಕೆಆರ್ ಪುರಂ ಮೆಟ್ರೋ ನಿಲ್ದಾಣದದವರೆಗೆ ಮೆಟ್ರೋ ಸೇವೆ ವಿಸ್ತರಿಸುವ ಸಲುವಾಗಿ ಆಗಸ್ಟ್​ 10, 11 ಮತ್ತು 14ರಂದು ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆ ಇರುವುದಿಲ್ಲ ಎಂದು ಬಿಎಂಆರ್ ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಬೈಯಪ್ಪನಹಳ್ಳಿ ಟರ್ಮಿನಲ್‌ನಿಂದ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ ಫೀಲ್ಡ್(ಕಾಡುಗೋಡಿ) ನಿಲ್ದಾಣಗಳವರೆಗೆ ಮುಂಜಾನೆ 5.00 ಗಂಟೆಯಿಂದ ಬೆಳಗ್ಗೆ 7.00 ಗಂಟೆಯವರೆಗೆ ಸಿಗ್ನಲಿಂಗ್ ಮತ್ತು ಇತರ ಸಂಬಂಧಿತ ಕಾಮಗಾರಿಗಾಗಿ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಸದರಿ ಕಾಮಗಾರಿಯನ್ನು ಪೂರ್ಣಗೊಳಿಸಲು ಆಗಸ್ಟ್ 10, 11 ರವರೆಗೆ​ ಮತ್ತೆ ಸ್ಥಗಿತಗೊಳಿಸಲಾಗುತ್ತಿದೆ.

ಸದರಿ ದಿನಗಳಂದು ಬೆಳ್ಳಗೆ 5.00 ಗಂಟೆಯಿಂದ 7.00 ಗಂಟೆಯವರೆಗೆ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ನಿಲ್ದಾಣದವರೆಗೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತದೆ. ಇದಲ್ಲದೆ, ಕೆಂಗೇರಿ ನಿಲ್ದಾಣದಿಂದ ರೈಲು ಸೇವೆಯನ್ನು ಚಲ್ಲಘಟ್ಟ ನಿಲ್ದಾಣದವರೆಗೆ ವಿಸ್ತರಿಸಲು ಸಿಗ್ನಲಿಂಗ್ ಮತ್ತು ಇತರ ಸಂಬಂಧಿತ ಕಾಮಗಾರಿಗಳಿಗಾಗಿ ಆಗಸ್ಟ್​​ 14 ರಂದು ಮುಂಜಾನೆ 5.00 ಗಂಟೆಯಿಂದ ಬೆಳಗ್ಗೆ 7.00 ಗಂಟೆಯವರೆಗೆ ಕೆಂಗೇರಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ಮೆಟ್ರೋ ಸೇವೆಗಳು ಇರುವುದಿಲ್ಲ.

ಈ ಸಮಯದಲ್ಲಿ ಬೈಯಪ್ಪನಹಳ್ಳಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಲಭ್ಯವಿರುತ್ತದೆ. ಬೆಳಿಗ್ಗೆ 7.00 ಗಂಟೆಯ ನಂತರ, ಬೈಯಪ್ಪನಹಳ್ಳಿ ಮತ್ತು ಕೆಂಗೇರಿ, ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳ ನಡುವೆ ಎಂದಿನಂತೆ ಮೆಟ್ರೋ ರೈಲು ಸೇವೆಗಳು ರಾತ್ರಿ 11.00 ರವರೆಗೆ ಲಭ್ಯವಿರುತ್ತವೆ.

ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಮ್ಮ ಮೆಟ್ರೋ ಪುಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಿ ಹಾಗೂ ಸಹಕರಿಸುವಂತೆ ಬಿಎಂಆರ್​ಸಿಎಲ್ ಕೋರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.