ನ್ಯಾಯಾಲಯದ ತೀರ್ಪು ತಿದ್ದಿದ ಆರೋಪ: ಬಸವ ತೀರ್ಥ ಮಠದ ಸಿದ್ದಲಿಂಗಸ್ವಾಮಿ ವಿರುದ್ಧ ಕೇಸ್ ದಾಖಲಿಸಲು ಆದೇಶ
ನ್ಯಾಯಾಲಯದ ಆದೇಶಗಳನ್ನು ನಕಲಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಲಿಂಗಾಯತ ಮಠಾಧೀಶರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೀದರ್ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಬೀದರ್: ನ್ಯಾಯಾಲಯದ ಆದೇಶಗಳನ್ನು ನಕಲಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಲಿಂಗಾಯತ ಮಠಾಧೀಶರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೀದರ್ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಬಸವ ತೀರ್ಥ ಮಠದ ಡಾ.ಸಿದ್ದಲಿಂಗ ಸ್ವಾಮಿ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿ (ಡಿಸಿ) ಗೋವಿಂದ ರೆಡ್ಡಿ ಅವರು ಬುಧವಾರ ಹುಮನಾಬಾದ್ ತಹಸೀಲ್ದಾರ್ ಅವರಿಗೆ ಆದೇಶಿಸಿದ್ದಾರೆ.
ದೂರುದಾರ ಚಂದ್ರಕಾಂತ ಜಲಾದಾರ, ಸ್ವಾಮೀಜಿ ನಡುವೆ ಭೂವಿವಾದಕ್ಕೆ ಸಂಬಂಧಿಸಿದಂತೆ 2017ರ ನವೆಂಬರ್ 17ರಂದು ಕೆಎಟಿಯ ಅಧಿಕೃತ ತೀರ್ಪನ್ನು ಬಸವತೀರ್ಥ ಮಠದ ಸ್ವಾಮೀಜಿ ಫೋರ್ಜರಿ ಮಾಡಿ ಸಿಕ್ಕಿಬಿದ್ದಿದ್ದರು. ಇದೀಗ ಕೋರ್ಟ್ ಆದೇಶದಂತೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಹುಮ್ನಾಬಾದ್ ತಹಶೀಲ್ದಾರ್ಗೆ ಬೀದರ್ ಡಿಸಿ ಗೋಂವಿದರೆಡ್ಡಿ ಆದೇಶಿಸಿದ್ದಾರೆ.
ನವೆಂಬರ್ 17, 2017 ರಂದು ಚಂದ್ರಕಾಂತ ಜಲದಾರ ಮತ್ತು ಆರೋಪಿ ಮಠಾಧೀಶರ ನಡುವಿನ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಆದೇಶ ನೀಡಿತು.
ಸಿದ್ಧಲಿಂಗ ಸ್ವಾಮಿ ಕೋರ್ಟ್ನ ತೀರ್ಪನ್ನು ಫೋರ್ಜರಿ 5-12-2017ರಂದು ಜಿಲ್ಲಾಧಿಕಾಗಳಿಗೆ ಅರ್ಜಿ ಸಲ್ಲಿಸಿ ತೀರ್ಪಿನಲ್ಲಿ ಇಲ್ಲದೇ ಇರುವುದನ್ನು ಸೇರಿಸಿರುವುದು ದೃಢಪಟ್ಟಿದ್ದು, ಸಿದ್ಧಲಿಂಗ ಸ್ವಾಮಿ ಕೋರ್ಟ್ನ ತೀರ್ಪನ್ನು ಫೋರ್ಜರಿ ಮಾಡಿ 5-12-2017ರಂದು ಜಿಲ್ಲಾಧಿಕಾಗಳಿಗೆ ಅರ್ಜಿ ಸಲ್ಲಿಸಿ ತೀರ್ಪಿನಲ್ಲಿ ಇಲ್ಲದೇ ಇರುವುದನ್ನು ಸೇರಿಸಿರುವುದು ದೃಢಪಟ್ಟಿದ್ದು,
ಆರೋಪಿ ಮಠಾಧೀಶರು 2017ರ ಡಿಸೆಂಬರ್ 5ರಂದು ಮೂಲ ಆದೇಶ ಪ್ರತಿಯಲ್ಲಿ ಇಲ್ಲದ ವಿಷಯಗಳನ್ನು ಸೇರಿಸಿ ಕೆಎಟಿಯಿಂದ ನಕಲಿ ಆದೇಶವನ್ನು ಸಲ್ಲಿಸಿದ್ದರು. ನಂತರ ಮಠಾಧೀಶರು ಆದೇಶದ ನಕಲಿ ಪ್ರತಿಯನ್ನು ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಹೈಕೋರ್ಟ್ನ ಕಲಬುರಗಿ ಪೀಠದ ಮೆಟ್ಟಿಲೇರಿದ್ದು, ಕ್ರಿಮಿನಲ್ ಮೊಕದ್ದಮೆ ಹೂಡಲು ನ್ಯಾಯಾಲಯ ಸೂಚನೆ ನೀಡಿತ್ತು.
ಇದನ್ನೂ ಓದಿ: ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಆದೇಶ
ಜಿಲ್ಲಾಧಿಕಾರಿ ರೆಡ್ಡಿ ಇದೀಗ ಐಪಿಸಿ ಸೆಕ್ಷನ್ 466 (ನ್ಯಾಯಾಲಯದ ದಾಖಲೆ ಅಥವಾ ಸಾರ್ವಜನಿಕ ನೋಂದಣಿಯ ನಕಲಿ) ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


