ಬೆಂಗಳೂರು: ಶೇ.25 ರಷ್ಟು 'ನಮ್ಮ ಕ್ಲಿನಿಕ್' ಗಳಲ್ಲಿ ರಾತ್ರಿ 8ರವರೆಗೆ ಸೇವೆ
ರಾಜ್ಯಾದ್ಯಂತ ಸದ್ಯ ಚಾಲ್ತಿಯಲ್ಲಿರುವ ನಮ್ಮ ಕ್ಲಿನಿಕ್ಗಳನ್ನು ನಂಬರ್ 1 ಕ್ಲಿನಿಕ್ಗಳನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ, ಪ್ರಾಯೋಗಿಕವಾಗಿ ಶೇಕಡ 25 ರಷ್ಟು ‘ನಮ್ಮ ಕ್ಲಿನಿಕ್’ಗಳಲ್ಲಿ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ಸೇವೆ ಒದಗಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯಾದ್ಯಂತ ಸದ್ಯ ಚಾಲ್ತಿಯಲ್ಲಿರುವ ನಮ್ಮ ಕ್ಲಿನಿಕ್ಗಳನ್ನು ನಂಬರ್ 1 ಕ್ಲಿನಿಕ್ಗಳನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ, ಪ್ರಾಯೋಗಿಕವಾಗಿ ಶೇಕಡ 25 ರಷ್ಟು ‘ನಮ್ಮ ಕ್ಲಿನಿಕ್’ಗಳಲ್ಲಿ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ಸೇವೆ ಒದಗಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಹೇಳಿದ್ದಾರೆ.
ಸದ್ಯ ನಮ್ಮ ಕ್ಲಿನಿಕ್ಗಳು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ ಸೇವೆ ನೀಡುತ್ತಿವೆ. ಇದರಿಂದಾಗಿ ಕೂಲಿ ಕಾರ್ಮಿಕರು ಹಾಗೂ ಉದ್ಯೋಗಸ್ಥರಿಗೆ ಸಮರ್ಪಕವಾಗಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಇಲಾಖೆಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಸಚಿವರು ನಮ್ಮ ಕ್ಲಿನಿಕ್ ಗಳ ಸಮಯ ಬದಲಾವಣೆ ಮಾಡಲು ಮುಂದಾಗಿದ್ದಾರೆ.
ಪ್ರಾಯೋಗಿಕ ಹಂತವಾಗಿ ರಾಜ್ಯದಲ್ಲಿರುವ ನಮ್ಮ ಕ್ಲಿನಿಕ್ಗಳಲ್ಲಿ ಶೇ 25 ರಷ್ಟು ಕ್ಲಿನಿಕ್ಗಳ ಸಮಯ ಬದಲಾವಣೆಗೆ ನಿರ್ಧರಿಸಲಾಗಿದೆ. ಅಸಹಾಯಕರು ಬಡವರಿಗೆ ಅನುಕೂಲ ಆಗಲಿ ಎಂದು ರಾಜ್ಯದ ನಗರ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್ಗಳನ್ನು ತೆರೆಯಲಾಗಿತ್ತು. ಆದರೆ, ನಮ್ಮ ಕ್ಲಿನಿಕ್ಗಳು ತೆರೆಯುತ್ತಿದ್ದ ಸಮಯ, ಜನಸಾಮಾನ್ಯರಿಗೆ ಅನುಕೂಲಕರವಾಗಿಲ್ಲ. ಪ್ರಸ್ತುತ ನಮ್ಮ ಕ್ಲಿನಿಕ್ಗಳು ಬೆಳಗ್ಗೆ 9 ಗಂಟೆಗೆ ತೆರದು ಮಧ್ಯಾಹ್ನ 12.30ಕ್ಕೆ ಮುಚ್ಚಲಾಗುತ್ತೆ. ಬಳಿಕ ಮಧ್ಯಾಹ್ನ 2 ಗಂಟೆಗೆ ತೆರೆದು 4.30ಕ್ಕೆ ಕ್ಲೋಸ್ ಮಾಡಲಾಗುತ್ತಿತ್ತು.
ಇದೀಗ ನಮ್ಮ ಕ್ಲಿನಿಕ್ಗಳನ್ನ ಸಂಜೆ ಕ್ಲಿನಿಕ್ ಮಾದರಿಯಲ್ಲಿ ಸಮಯ ಬದಲಾಯಿಸಲು ನಿರ್ಧರಿಸಲಾಗಿದ್ದು, 12 ಗಂಟೆಯಿಂದ ರಾತ್ರಿ 8 ಗಂಟೆಯ ವರೆಗೆ ಕಾರ್ಯ ನಿರ್ವಹಿಸುವಂತೆ ತಯಾರಿ ನಡೆಸಲಾಗಿದೆ. ಕೂಲಿ ಕಾರ್ಮಿಕರು ಕೆಲಸಕ್ಕೆ ಹೋಗುವ ಸಮಯ ಹಾಗೂ ನಮ್ಮ ಕ್ಲಿನಿಕ್ಗಳ ಸಮಯ ಎರಡು ಕೂಡ ಒಂದೇ ಆಗುತ್ತಿತ್ತು.
ಇದರಿಂದ ಬಡವರು ಈ ಸೌಲಭ್ಯದಿಂದ ವಂಚಿತರಾಗುತ್ತಾರೆ. ಹೀಗಾಗಿ ರಾತ್ರಿಯ ವರೆಗೂ ನಮ್ಮ ಕ್ಲಿನಿಕ್ ಗಳು ಕಾರ್ಯ ನಿರ್ವಹಿಸುವಂತೆ ಸಮಯ ಬದಲಾವಣೆ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದರು.
ರಾತ್ರಿವರೆಗೂ ಕಾರ್ಯ ನಿರ್ವಹಿಸಬೇಕಾದರೆ ಎರಡು ಶಿಫ್ಟ್ ಮಾಡಬೇಕಾಗಬಹುದು. ಆಗ ಹೆಚ್ಚಿನ ವೈದ್ಯರು ಬೇಕಾಗುತ್ತಾರೆ. ಈಗಾಗಲೇ ವೈದ್ಯರ ಕೊರತೆಯಿದೆ ಎಂಬ ವಾದಗಳು ಕೂಡಾ ಕೇಳಿ ಬಂದಿದ್ದವು. ಅಂತಿಮವಾಗಿ ಎರಡು ಶಿಫ್ಟ್ ಮಾಡುವ ಬದಲು ಒಂದೇ ಶಿಫ್ಟ್'ನಲ್ಲಿ ಸಮಯ ಬದಲಾವಣೆ ಮಾಡಲು ಆರೋಗ್ಯ ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದರು.
ಇದನ್ನೂ ಓದಿ: ಬೆಂಗಳೂರು: ನಗರದಲ್ಲಿ ನಮ್ಮ ಕ್ಲಿನಿಕ್ಗಳನ್ನು ತೆರೆದಿದ್ದರೂ, ಹಲವೆಡೆ ಸಿಬ್ಬಂದಿ ಕೊರತೆ ಸೇರಿದಂತೆ ಇತರೆ ಸಮಸ್ಯೆಗಳು
ಬೆಳಗ್ಗೆ 7 ಗಂಟೆಗೆ ನಮ್ಮ ಕ್ಲಿನಿಕ್ಗಳು ತೆರೆಯಲಿದ್ದು, ಬೆಳಗ್ಗೆ ಹೊತ್ತಿನಲ್ಲಿ ಲ್ಯಾಬ್ ಟೆಕ್ನಿಷಿಯನ್ ಮಾತ್ರ ಇರುತ್ತಾರೆ. ಬಳಿಕ 12 ಗಂಟೆಯಿಂದ 8 ಗಂಟೆವರೆಗೂ ವೈದ್ಯರು ಹಾಗೂ ನರ್ಸ್ ಜನರಿಗೆ ಚಿಕಿತ್ಸೆ ನೀಡುವಂತೆ ಯೋಜನೆ ರೂಪಿಸಲಾಗಿದೆ.
ರಾಜ್ಯದಲ್ಲಿ ಒಟ್ಟು 415 ನಮ್ಮ ಕ್ಲಿನಿಕ್ಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ಶೇ.25 ರಷ್ಟು ಕ್ಲಿನಿಕ್ಗಳನ್ನು ಪ್ರಾಯೋಗಿಕ ಹಂತದಲ್ಲಿ ಸಂಜೆ ಕ್ಲಿನಿಕ್ಗಳಾಗಿ ಸಮಯ ಬದಲಾವಣೆ ಮಾಡಲಾಗುತ್ತಿದೆ. ಇವುಗಳ ಯಶಸ್ವಿಯಾದರೆ ರಾಜ್ಯಾದ್ಯಂತ ಎಲ್ಲಾ ನಮ್ಮ ಕ್ಲಿನಿಕ್ಗಳ ಸಮಯವನ್ನು ಬದಲಾವಣೆ ಮಾಡಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.
ಸಂಜೆ ವೇಳೆ ನಮ್ಮ ಕ್ಲಿನಿಕ್ಗಳಲ್ಲಿ ಒಪಿಡಿ ತೆರೆಯುವುದರಿಂದ ಸಾಕಷ್ಟು ಅನುಕೂಲ ಕೂಡ ಆಗಲಿದೆ. ಹೀಗೆ ಆಗುವ ಬದಲಾವಣೆಯಿಂದ ಜನರಿಗೆ ಅನುಕೂಲ ಆಗುತ್ತದೆಯೇ, ಜನ ಈ ಯೋಜನೆಯ ಫಲಾನುಭವಿಗಳಾಗುತ್ತಾರಾ ಎಂದು ಕಾದು ನೋಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸಕ್ತಿ ತೋರಿದ್ದಾರೆ. ಬಳಿಕ ಹಂತ ಹಂತವಾಗಿ ನಮ್ಮ ಕ್ಲಿನಿಕ್ಗಳಲ್ಲಿ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಯೋಜಿಸಲಾಗಿದೆ.
ಸುಮಾರು ಮೂರು ಲಕ್ಷದ 96 ಸಾವಿರ ಮಹಿಳೆಯರು ಹಾಗೂ 4 ಲಕ್ಷದ 21 ಸಾವಿರ ಪುರುಷರು ನಮ್ಮ ಕ್ಲಿನಿಕ್ ಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪ್ರತಿ ದಿನ ಸರಾಸರಿ 35 ರಿಂದ 40 ಜನರು ಚಿಕಿತ್ಸೆ ಪಡೆಯಲು ನಮ್ಮ ಕ್ಲಿನಿಕ್ ಗಳಿಗೆ ಭೇಟಿ ನೀಡುತ್ತಿದ್ದಾರೆ. ಇನ್ನೂ 2 ಲಕ್ಷದ 88 ಸಾವಿರ ಜನರು ರೋಗ ಪರೀಕ್ಷೆಗಳನ್ನು ಮಾಡಿಸಿಕೊಂಡಿದ್ದಾರೆ. ನಮ್ಮ ಕ್ಲಿನಿಕ್ಗಳಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ವಿಸುವ ನಿಟ್ಟಿನಲ್ಲಿ ಮಹತ್ತರ ಬದಲಾವಣೆಗಳನ್ನು ತರಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


