ಬುಡಕಟ್ಟು ಜನರ ಸ್ಥಳಾಂತರಕ್ಕೆ ಹೊಸ ನೀತಿ ರೂಪಿಸಲು ಸರ್ಕಾರ ಮುಂದು!
ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷದ ಪ್ರಕರಣಗಳ ಪರಿಹರಿಸಲು, ಅರಣ್ಯ ಪ್ರದೇಶಗಳ ರಕ್ಷಣೆ ಮಾಡಲು ಮತ್ತು ಆದಿವಾಸಿಗಳ ಸುರಕ್ಷತೆ ಮತ್ತು ಅಭಿವೃದ್ಧಿಗಾಗಿ ಪ್ರತ್ಯೇಕ ನೀತಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು: ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷದ ಪ್ರಕರಣಗಳ ಪರಿಹರಿಸಲು, ಅರಣ್ಯ ಪ್ರದೇಶಗಳ ರಕ್ಷಣೆ ಮಾಡಲು ಮತ್ತು ಆದಿವಾಸಿಗಳ ಸುರಕ್ಷತೆ ಮತ್ತು ಅಭಿವೃದ್ಧಿಗಾಗಿ ಪ್ರತ್ಯೇಕ ನೀತಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಎರಡು ದಿನಗಳ ಹಿಂದೆ ಅರಣ್ಯ ಅಧಿಕಾರಿಗಳು ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಅರಣ್ಯ ಭೂಮಿ, ಅತಿಕ್ರಮಣಗಳ ಸ್ಥಿತಿ ಮತ್ತು ಜನವಸತಿ ಪ್ರದೇಶಗಳ ಸಮೀಕ್ಷೆ ಕುರಿತು ಚರ್ಚೆ ನಡೆಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರಣ್ಯ, ಸಚಿವ ಈಶ್ವರ್ ಖಂಡ್ರೆ ಅವರು,ಈ ಸಮೀಕ್ಷೆಯನ್ನು ಬಹಳ ಹಿಂದೆಯೇ ಪ್ರಾರಂಭಿಸಬೇಕಾಗಿತ್ತು, ಆದರೆ, ಸಿಬ್ಬಂದಿ ಕೊರತೆಯಿಂದಾಗಿ ವಿಳಂಬವಾಯಿತು ಎಂದು ಹೇಳಿದರು.
ಡೀಮ್ಡ್ ಫಾರೆಸ್ಟ್ ಸೇರಿದಂತೆ ಅರಣ್ಯ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲು ಉತ್ಸುಕವಾಗಿರುವ ಆದಿವಾಸಿಗಳ ಪುನರ್ವಸತಿ ಕುರಿತು ಸರ್ಕಾರದ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರವು ಮಾನವ-ಪ್ರಾಣಿ ಸಂಘರ್ಷದ ಸಮಸ್ಯೆಯನ್ನು ಪರಿಹರಿಸಲು ಕ್ರಮಗಳ ಕೈಗೊಳ್ಳುತ್ತಿದೆ. ಇದರಲ್ಲಿ ಆದಿವಾಸಿಗಳ ಸ್ಥಳಾಂತರ ಕೂಡ ಸೇರಿದೆ. ಈ ನಿಟ್ಟಿನಲ್ಲಿ ಕೆಲಸಗಳು ಪ್ರಾರಂಭವಾಗಿದೆ ಎಂದು ತಿಳಿಸಿದರು.
ಆದ್ಯತೆ ಹಾಗೂ ಮಾನದಂಡಗಳಿಗಾಗಿ ವರದಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ತಜ್ಞರು ಮಾತನಾಡಿ, ಮಾನವ-ಪ್ರಾಣಿ ಸಂಘರ್ಷದಿಂದ ಸಾವುಗಳು ಹೆಚ್ಚುತ್ತಿರುವ ಘಟನೆಗಳನ್ನು ಉಲ್ಲೇಖಿಸಿ, ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಿಧಾನಗತಿಯಲ್ಲಿ ನಡೆಯುತ್ತಿದ್ದರೆ, ನಾಗರಹೊಳೆ, ಮಲ್ಲೆ ಮಹದೇಶ್ವರ ಬೆಟ್ಟ, ಕುದುರೆಮುಖದಂತಹ ಅರಣ್ಯ ಪ್ರದೇಶಗಳಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಅಭಿವೃದ್ಧಿ ಕಾರ್ಯಗಳಿಗೆ ಅರಣ್ಯ ಪ್ರದೇಶಗಳ ಬಳಕೆಗೆ ಸರ್ಕಾರ ಉತ್ಸುಕವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


