ರಾಜ್ಯ

ಕಾರವಾರ: ನೌಕಾನೆಲೆಯ ಟಗ್ ಬೋಟ್‌ನಲ್ಲಿ ಅಗ್ನಿ ಅವಘಡ

ಉತ್ತರ ಕನ್ನಡ ಜಿಲ್ಲೆಯ ಅರ್ಗಾದ ಕದಂಬ ನೌಕಾನೆಲೆಯ ಡಾಕ್‌ಯಾರ್ಡ್‌ನಲ್ಲಿದ್ದ ಟಗ್ ಬೋಟ್‌ನಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದೆ.

ಕಾರವಾರ: ನೌಕಾನೆಲೆಯ ಟಗ್ ಬೋಟ್‌ನಲ್ಲಿ ಅಗ್ನಿ ಅವಘಡ
ಟಗ್ ಬೋಟ್‌ನಲ್ಲಿ ಅಗ್ನಿ ಅವಘಡ
Published On :

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅರ್ಗಾದ ಕದಂಬ ನೌಕಾನೆಲೆಯ ಡಾಕ್‌ಯಾರ್ಡ್‌ನಲ್ಲಿದ್ದ ಟಗ್ ಬೋಟ್‌ನಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದೆ.

ಇಂದು ಮಧ್ಯಾಹ್ನ ಈ ಅವಘಡ ಸಂಭವಿಸಿದ್ದು, ದೊಡ್ಡ ಗಾತ್ರದ ದೋಣಿಗಳನ್ನು ನೌಕಾನೆಲೆಗೆ ತರಲು ಬಳಸುವ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. 

ಮೂಲಗಳ ಪ್ರಕಾರ, ಟಗ್ ಬೋಟ್ ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಡೀಸೆಲ್ ಟ್ಯಾಂಕ್‌ಗೆ ಹರಡಿ, ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ನೌಕಾಪಡೆಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ.

ಆದರೆ ಬೆಂಕಿ ಹೆಚ್ಚು ತೀವ್ರವಾಗಿ ಹರಡುತ್ತಿದ್ದರಿಂದ ಕಾರವಾರದಿಂದ ಅಗ್ನಿಶಾಮಕ ವಾಹನಗಳನ್ನು ಕರೆಯಿಸಿಕೊಂಡು ಬೆಂಕಿ ನಿಯಂತ್ರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಂತ್ರಿಕ ದೋಷದಿಂದ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ಯಾವುದೇ ಜೀವ ಹಾನಿಯಾಗಿಲ್ಲ. ಆದರೆ ನೌಕಾಪಡೆಯ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.