ಯಾದಗಿರಿ: ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು 10 ತಿಂಗಳ ಮಗುವಿಗೆ ಗಾಯ!
ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 10 ತಿಂಗಳ ಮಗುವಿಗೆ ಗಾಯಗೊಂಡಿರುವ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಮರಕಲ್ ಗ್ರಾಮದಲ್ಲಿ ನಡೆದಿದೆ.

ಯಾದಗಿರಿ: ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 10 ತಿಂಗಳ ಮಗುವಿಗೆ ಗಾಯಗೊಂಡಿರುವ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಮರಕಲ್ ಗ್ರಾಮದಲ್ಲಿ ನಡೆದಿದೆ.
ಅಂಗನವಾಡಿ ಕೇಂದ್ರದಲ್ಲಿ ಶಿಶುಗಳಿಗೆ ಇಂದ್ರಧನುಷ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ಅಧಿಕಾರಿಗಳು ಆಯೋಜಿಸಿದ್ದರು. ಅಂಗನವಾಡಿ ಕೇಂದ್ರಕ್ಕೆ ಲಸಿಕೆ ಹಾಕಿಸಲು ಮಗುವಿನ ಜೊತೆ ಕುಟುಂಬಸ್ಥರು ಆಗಮಿಸಿದ್ದರು. ಈ ವೇಳೆ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದಿದೆ.
ಗಾಯಗೊಂಡ ಮಗು ತಲೆಗೆ ಬ್ಯಾಂಡೇಜ್ ಹಾಕಿಕೊಂಡು ನಗುತ್ತಿರುವ ಮಗುವಿನ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂದ್ರಧನುಷ್ ಕಾರ್ಯಕ್ರಮದಲ್ಲಿ ಡಿಫ್ತೀರಿಯಾ, ನಾಯಿಕೆಮ್ಮು, ನ್ಯುಮೋನಿಯಾಕ್ಕೆ ಕಾರಣವಾಗುವ ಹಿಮೋಫಿಲಸ್ ಇನ್ಫ್ಲುಯೆಂಜಾ ಟೈಪ್ ಬಿ ಮತ್ತು ಇತರ ಎಂಟು ಮಾರಣಾಂತಿಕ ಕಾಯಿಲೆಗಳ ವಿರುದ್ಧ ಲಸಿಕೆ ಹಾಕಲಾಗುತ್ತದೆ.
10 ತಿಂಗಳ ಮಗು ಕೀರ್ತಿಯನ್ನು ಇತರ ಅನೇಕ ಮಕ್ಕಳೊಂದಿಗೆ ಅಲ್ಲಿಗೆ ಕರೆದೊಯ್ಯಲಾಯಿತು. ಲಸಿಕೆ ಕಾರ್ಯಕ್ರಮ ನಡೆಯುತ್ತಿದ್ದಾಗ ಕೇಂದ್ರದ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದೆ. ಆರಕ್ಕೂ ಹೆಚ್ಚು ಮಕ್ಕಳು ಮತ್ತು ಪೋಷಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೂರು ವರ್ಷಗಳ ಹಿಂದೆ ಕಟ್ಟಡ ನಿರ್ಮಾಣವಾಗಿದ್ದು, ಕಳಪೆ ಕಾಮಗಾರಿಯಿಂದ ಘಟನೆ ನಡೆದಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


