ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಅವಹೇಳನಕಾರಿ ಹೇಳಿಕೆಗಳ ನೀಡದಿರಿ: ಸ್ಪೀಕರ್ ಯುಟಿ ಖಾದರ್
ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಆಕ್ಷೇಪಾರ್ಹ ಅಥವಾ ಅವಹೇಳನಕಾರಿ ಭಾಷೆಯನ್ನು ಬಳಸಲು ಯಾವುದೇ ಸಂವಿಧಾನವು ಅನುಮತಿಸುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಗುರುವಾರ ಹೇಳಿದರು.

ವಿಜಯಪುರ: ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಆಕ್ಷೇಪಾರ್ಹ ಅಥವಾ ಅವಹೇಳನಕಾರಿ ಭಾಷೆಯನ್ನು ಬಳಸಲು ಯಾವುದೇ ಸಂವಿಧಾನವು ಅನುಮತಿಸುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಗುರುವಾರ ಹೇಳಿದರು.
ಸಿಂದಗಿ ಪಟ್ಟಣದ ಹೆಚ್.ಜಿ.ಕಾಲೇಜು ಸಭಾಭವನದಲ್ಲಿ ಟಿಎಸ್'ಪಿಎಸ್ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳುವಲ್ಲಿ ಸಂವಿಧಾನದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು.
ಬೇಜವಾಬ್ದಾರಿ ಭಾಷಣದಿಂದ ಅನೇಕ ಪ್ರತಿಕೂಲ ಪರಿಣಾಮಗಳು ಎದುರಾಗುವುದನ್ನು ನಾವು ನೋಡಿದ್ದೇವೆ, ಅಂತಹ ಭಾಷಣಗಳಿಂದ ಉಂಟಾದ ಹಾನಿಗಳನ್ನು ಸರಿಪಡಿಸಲು ಅಮೂಲ್ಯವಾದ ಸಮಯ ವ್ಯರ್ಥವಾಗುತ್ತದೆ" ಎಂದು ಹೇಳಿದರು.
ಸಮಾಜದ ಹಿತಾಸಕ್ತಿ, ಜನಕಲ್ಯಾಣ ವಿಚಾರದಲ್ಲಿ ರಾಜಿಯಾಗದಂತೆ ಮಾಡಬೇಕು. ವಿಧಾನಸಭಾಧ್ಯಕ್ಷರ ಪಾತ್ರ ಅತ್ಯಂತ ಗೌರವಯುತ ಮತ್ತು ಅತ್ಯಂತ ಜವಾಬ್ದಾರಿಯುತವಾಗಿದ್ದು, ಸಂವಿಧಾನದ ತತ್ವಗಳನ್ನು ರಕ್ಷಿಸುವುದು ಮತ್ತು ಉತ್ತೇಜಿಸುವುದು ಸ್ಪೀಕರ್ ಅವರ ಕೆಲಸವಾಗಿದೆ. ಸಂವಿಧಾನದ ಆದರ್ಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಮಾತ್ರ ಸದೃಢ ಪ್ರಜಾಪ್ರಭುತ್ವ ಸಂರಕ್ಷಣೆ ಸಾಧ್ಯ. ಪ್ರಜಾಪ್ರಭುತ್ವವನ್ನು ಪ್ರಸ್ತುತ ಮತ್ತು ಮುಂದಿನ ಪೀಳಿಗೆಗೆ ರಕ್ಷಿಸುವ ಸಾಮೂಹಿಕ ಜವಾಬ್ದಾರಿಯನ್ನು ನಾಗರಿಕರು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ನಾವು ವಿದೇಶಕ್ಕೆ ಹೋದಾಗ ಮಾತ್ರ ನಮ್ಮ ದೇಶದ ಮೌಲ್ಯ ಮತ್ತು ಶ್ರೀಮಂತಿಕೆ ಅರಿವಾಗುತ್ತದೆ. ಕರಾವಳಿ ಭಾಗದ ಅನೇಕ ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿಯೇ ಪಾಸ್‌ಪೋರ್ಟ್ ಸಿದ್ಧಪಡಿಸಿ ವ್ಯಾಸಂಗದ ನಂತರ ಸಂಪಾದನೆಗಾಗಿ ವಿದೇಶಗಳಿಗೆ ತೆರಳುತ್ತಾರೆ. ಆದರೆ, ವಿದೇಶಕ್ಕೆ ಹೋದಾಗ, ತಮ್ಮ ದೇಶದೊಂದಿಗೆ ಹೊಂದಿರುವ ಆಳವಾದ ಬಾಂಧವ್ಯವನ್ನು ಅರಿತುಕೊಳ್ಳುತ್ತಾರೆ ಎಂದರು.
ಇದೇ ವೇಳೆ ಕೇವಲ ನಕಾರಾತ್ಮಕ ಅಂಶಗಳ ಮೇಲೆ ಕೇಂದ್ರೀಕರಿಸದೆ ದೇಶದ ಸಕಾರಾತ್ಮಕ ಅಂಶಗಳ ಮೇಲೆ ಕೇಂದ್ರೀಕರಿಸುವಂತ ಜನತೆಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಅಶೋಕ ಮನಗೂಳಿ, ಕಾಂಗ್ರೆಸ್ ಮುಖಂಡ ಎಸ್‌ಎಂ ಪಾಟೀಲ್ ಗಣಿಹಾರ್, ಡಿಸಿ ಟಿ ಭೂಬಾಲನ್, ಜಿಪಂ ಸಿಇಒ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


