ಮಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ 3.16 ಲಕ್ಷ ರೂ. ಮೌಲ್ಯದ ಗಾಂಜಾ ವಶ
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ 3.16 ಲಕ್ಷ ರೂ. ಮೌಲ್ಯದ 6.33 ಕೆಜಿ ಒಣ ಗಾಂಜಾವನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ವಶಪಡಿಸಿಕೊಂಡಿದೆ.

ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ 3.16 ಲಕ್ಷ ರೂ. ಮೌಲ್ಯದ 6.33 ಕೆಜಿ ಒಣ ಗಾಂಜಾವನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ವಶಪಡಿಸಿಕೊಂಡಿದೆ.
ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೇವಲ ನಾಲ್ಕು ದಿನಗಳಷ್ಟೇ ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಪಾಲಕ್ಕಾಡ್ ರೈಲ್ವೆ ವಿಭಾಗದ ಅಪರಾಧ ತನಿಖಾ ದಳ ಹಾಗೂ ರಾಜ್ಯ ಅಬಕಾರಿ ಇಲಾಖೆಯೊಂದಿಗೆ ಆರ್‌ಪಿಎಫ್ ತಂಡವು ರೈಲುಗಳಲ್ಲಿ ತಪಾಸಣೆ ನಡೆಸುತ್ತಿದೆ.
ಗುರುವಾರ ಕಾರವಾರ-ಯಶವಂತಪುರ ಎಕ್ಸ್‌ಪ್ರೆಸ್ ರೈಲಿನಲ್ಲಿಯೂ ತಪಾಸಣೆ ನಡೆಸಲಾಗಿದ್ದು, ಈ ವೇಳೆ ರೈಲಿನಲ್ಲಿ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ.
ಎಕ್ಸ್‌ಪ್ರೆಸ್ ರೈಲಿನ ಜನರಲ್ ಕೋಚ್‌ನಲ್ಲಿ ಗಾಂಜಾ ಇರುವ ಲಗೇಜ್ ಪತ್ತೆಯಾಗಿದೆ. ಆದರೆ, ಬ್ಯಾಗ್ ಯಾರದ್ದು ಎಂಬುದು ತಿಳಿದುಬಂದಿಲ್ಲ. ಇದರಂತೆ ಆರ್‌ಪಿಎಫ್ ಸಿಬ್ಬಂದಿ ಬ್ಯಾಗ್ ಅನ್ನು ವಶಪಡಿಸಿಕೊಂಡು, ಅಬಕಾರಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.
ಈ ಸಂಬಂಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


